ಆಶ್ರಯ ಬಡಾವಣೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭೇಟಿ

ಸಂಜೆವಾಣಿ ವಾರ್ತೆ

ಚಿತ್ರದುರ್ಗ.ಆ.೧೯;ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ ಬೇದಿ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಶುಕ್ರವಾರ ಆಶ್ರಯ ಬಡಾವಣೆಗೆ ಭೇಟಿ ನೀಡಿದರು.ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ನಂತರ ಆಶ್ರಯ ಬಡಾವಣೆಯ ವಿವಿಧ ಮನೆಗಳಿಗೆ ಭೇಟಿ ನೀಡಿದ ಅವರು, ಸ್ವಚ್ಛ ಕುಡಿಯುವ ನೀರನ್ನು ಉಪಯೋಗಿಸಬೇಕು. ಬಿಸಿ,ಶುದ್ದ ಆಹಾರ ಹಾಗೂ ಸುತ್ತಮುತ್ತಲಿನ ಪರಿಸರವನ್ನು ನಿರ್ಮಲವಾಗಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಶ್ರೀನಿವಾಸ್, ವೈದ್ಯರು, ಆಶ್ರಯ ಬಡಾವಣೆಯ ನಿವಾಸಿಗಳು ಇದ್ದರು.