ಆಸೀಸ್ ವಿರುದ್ಧದ ಎರಡು ಪಂದ್ಯಗಳಗೆ ಟಿ.ನಟರಾಜನ್ ಆಯ್ಕೆ

ಸಿಡ್ನಿ, ಜ.1- ಆಸ್ಟ್ರೇಲಿಯಾ ವಿರುದ್ದ ಬಾಕಿ ಉಳಿದಿರುವ ಎರಡು ಟೆಸ್ಟ್‌ ಪಂದ್ಯಗಳಿಗೆ ತಮಿಳುನಾಡು ವೇಗದ ಬೌಲರ್ ಟಿ.ನಟರಾಜನ್ ಅವರನ್ನು ಆಯ್ಕೆ ಮಾಡಲಾಗಿದೆ.
ವೇಗದ ಬೌಲರ್ ಉಮೇಶ್ ಯಾದವ್ ಗಾಯಾಳುವಾಗಿರುವ ಹಿನ್ನೆಲೆಯಲ್ಲಿ ಅವರ ಬದಲಿಗೆ ನಟರಾಜನ್ ಗೆ ಅವಕಾಶ ನೀಡಲಾಗಿದೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಿ-20 ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಅವಕಾಶ ಪದಾರ್ಪಣೆ ಮಾಡಿದ್ದ ನಟರಾಜನ್ ಈಗ ಟೆಸ್ಟ್ ಕ್ರಿಕೆಟ್ ನಲ್ಲಿ ಆಡುವ ಅದೃಷ್ಟ ಪ್ರಾಪ್ತವಾಗಿದೆ. ಆದರೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಹನ್ನೊಂದು ಮಂದಿ ಆಟಗಾರರ ಪಟ್ಟಿಯಲ್ಲಿ ನಟರಾಜನ್ ಅವಕಾಶ ಸಿಗಲಿದೆಯೇ ಎಂಬುದು ಕುತೂಹಲ ಕೆರಳಿಸಿದೆ.
ಮೊಹ್ಮದ್ ಶಮಿ ಬದಲಿಗೆ ಶಾರ್ದೂಲ್ ಠಾಕೂರ್ ಅವರನ್ನು ಹೆಸರಿಸಲಾಗಿದೆ. ಇದೇ ವೇಳೆ ರೋಹಿತ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹನ್ನೊಂದು ಮಂದಿ ಆಟಗಾರರ ಪಟ್ಟಿಯಲ್ಲಿ ಸ್ಥಾನ ಸಿಗುವುದೇ ಎಂಬುದು ಇನ್ನೂ ಖಾತ್ರಿಯಾಗಿಲ್ಲ.
ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡ :
ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಮಯಂಕ್ ಅಗರವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಶುಭಮನ್ ಗಿಲ್, ವೃದ್ದಿಮಾನ್ ಸಹಾ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಜಸ್‌ಪ್ರೀತ್ ಬೂಮ್ರಾ, ನವದೀಪ್ ಸೈನಿ, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜ, ಆರ್. ಅಶ್ವಿನ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಟಿ. ನಟರಾಜನ್.

ಎರಡು ಪಂದ್ಯಗಳ ವೇಳಾಪಟ್ಟಿ
ಮೂರನೇ ಟೆಸ್ಟ್: ಜ.7ರಿಂದ 11ರ ವರೆಗೆ, ಸಿಡ್ನಿ ಕ್ರಿಕೆಟ್ ಮೈದಾನ
ಅಂತಿಮ ಟೆಸ್ಟ್: ಜ.15ರಿಂದ 19ರ ವರೆಗೆ, ಬ್ರಿಸ್ಬೇನ್.