ಆಸೀಸ್ ವಿರುದ್ಧದ ೨ನೇ ಪಂದ್ಯಕ್ಕೆ ಶುಭ್‌ಮನ್ -ಸಿರಾಜ್‌ಗೆ ಅವಕಾಶ


ನವದೆಹಲಿ,ಡಿ.೨೫- ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಲಿರುವ ೨ನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶುಭ್‌ಮನ್ ಗಿಲ್ ಹಾಗೂ ಮಹ್ಮದ್ ಸಿರಾಜ್ ಅವರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.
ಆದರೆ, ಕರ್ನಾಟಕದ ಕೆ.ಎನ್ ರಾಹುಲ್ ಅವರನ್ನು ಕೈಬಿಡಲಾಗಿದೆ.
ಫಾರಂ ಕಂಡುಕೊಳ್ಳಲು ವಿಫಲವಾಗಿರುವ ಪೃಥ್ವಿಶಾ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಕರ್ನಾಟಕದ ಮಯಾಂಕ್ ಅಗರ್‌ವಾಲ್ ಜತೆ ಶುಭ್‌ಮನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಅಡಿಲೆಡ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಸಿದ್ದ ತಂಡದಲ್ಲಿ ನಾಲ್ವರು ಆಟಗಾರರನ್ನು ನಾಳಿನ ಪಂದ್ಯಕ್ಕಾಗಿ ಬದಲಾವಣೆ ಮಾಡಲಾಗಿದೆ.
ಭಾರತದ ಪರ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಸಿದ ನಂತರ ಶುಭ್‌ಮನ್‌ಗಿಲ್ ಮತ್ತು ಅಗರ್‌ವಾಲ್ ಇನ್ನಿಂಗ್ಸ್ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಚೊಚ್ಚಲ ಮಗು ನಿರೀಕ್ಷೆಯಲ್ಲಿರುವ ನಾಯಕ ವಿರಾಟ್‌ಕೊಹ್ಲಿ ಸ್ವದೇಶಕ್ಕೆ ವಾಪಸ್ಸಾಗಿದ್ದು, ಅವರ ಬದಲಿಗೆ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿದೆ.
ಬೌಲಿಂಗ್ ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ ಮೊಹ್ಮದ್ ಶಮಿ ಬದಲಿಗೆ ಮೊಹ್ಮದ್ ಶಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಶಮಿ ಗಾಯಾಳುವಾಗಿದ್ದು, ೬ ವಾರಗಳ ಕಾಲ ವಿಶ್ರಾಂತಿ ನೀಡಲಾಗಿದೆ.
ವಿರಾಟ್ ಕೊಹ್ಲಿ ಸ್ವದೇಶಕ್ಕೆ ವಾಪಸ್ಸಾದ ಹಿನ್ನೆಲೆಯಲ್ಲಿ ರೆಹಾನೆ ತಂಡದ ಸಾರಥ್ಯ ವಹಿಸಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆನೀಡಿರುವ ಅವರು, ಆರಂಭಿಕ ಆಟಗಾರರ ಮೇಲೆ ತಾವು ಯಾವುದೇ ಒತ್ತಡ ಹೇರದೆ ಮುಕ್ತವಾಗಿ ಆಡಲು ಸ್ವಾತಂತ್ರ್ಯ ನೀಡಲಾಗಿದೆ ಎಂದರು.
ಮೊದಲ ಪಂದ್ಯದಲ್ಲಿ ಭಾರತ ೨ನೇ ಇನ್ನಿಂಗ್ಸ್‌ನಲ್ಲಿ ಕೇವಲ ೩೬ ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿದೆ. ಇದು ವ್ಯಾಪಕ ಟೀಕೆಗೂ ಗುರಿಯಾಗಿದ್ದು, ನಾಳಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಈಗಾಗಲೇ ಆಸ್ಟ್ರೇಲಿಯಾ ೧-೦ ಯಿಂದ ಮುನ್ನಡೆ ಸಾಧಿಸಿದ್ದು, ನಾಳಿನ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದೆ.
ತಂಡ:ಮಯಾಂಕ್ ಅಗರ್‌ವಾಲ್, ಶುಭ್‌ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಹನುಮಾ ವಿಹಾರಿ, ವೃಷಭ್‌ಪಂತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಜಸ್‌ಪ್ರಿತ್ ಬುಮ್ರಾ, ಉಮೇಶ್ ಯಾಧವ್ ಮತ್ತು ಮೊಹ್ಮದ್ ಸಿರಾಜ್,