ಆಸೆ-ಆಮಿಷಕ್ಕೆ ಒಳಗಾಗದೇ ಕಾರ್ಯ ನಿರ್ವಹಿಸಿ – ಬಸವರಾಜ್ ಆರ್.ಮಗದುಮ್

ಚಿತ್ರದುರ್ಗ.ಜ.೭; ಸಾರ್ವಜನಿಕರ ಕೆಲಸದಲ್ಲಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ಸಾರ್ವಜನಿಕರು ನೀಡಿರುವ ಅರ್ಜಿಗಳನ್ನು ಶೀಘ್ರವಾಗಿ ಕಾನೂನು ಚೌಕಟ್ಟಿನಲ್ಲಿ ವಿಲೇವಾರಿ ಮಾಡಬೇಕು ಎಂದು ಭ್ರಷ್ಟಾಚಾರ ನಿಗ್ರಹದ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಆರ್ ಮಗದುಮ್ ಅಧಿಕಾರಿಗಳಿಗೆ ತಿಳಿಸಿದರು.
 ಹೊಸದುರ್ಗ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಹಾಗೂ ಹೊಳಲ್ಕೆರೆ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಚಿತ್ರದುರ್ಗ ಎಸಿಬಿ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕ ಕೆಲಸಗಳನ್ನು ವಿಳಂಬ ಮಾಡದಂತೆ ನಿಗದಿತ ಅವಧಿಯೊಳಗೆ ಸಕಾಲದಲ್ಲಿ ಮಾಡಿಕೊಡುವಂತೆ ಸರ್ಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
  ಸರ್ಕಾರಿ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ದಕ್ಷತೆಯಿಂದ ನಿರ್ವಹಿಸಲು ಸಾರ್ವಜನಿಕರಿಂದ ತೊಂದರೆ ಉಂಟಾದಲ್ಲಿ ಎಸಿಬಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಸಭೆಯಲ್ಲಿ ಎಸಿಬಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಿ.ಜೆ.ಚೈತನ್ಯ, ಪ್ರವೀಣ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.