ಆಸ್ಟ್ರೇಲಿಯದ ಕಾನ್ಸುಲೇಟ್‌ ಕಚೇರಿ ಬೆಂಗಳೂರಿನಲ್ಲಿ ಶೀಘ್ರ : ಸಿಎಂ

ಬೆಂಗಳೂರು, ಜೂ. 1-ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ಕರ್ನಾಟಕ ಉತ್ಸುಕವಾಗಿದ್ದು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ಶೀಘ್ರ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ ಬ್ಯಾರಿ ಓʼ ಫ್ಯಾರೆಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತುಕತೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ್ದಾರೆ

ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯ ಬಲಪಡಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ

ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು