ಆಸ್ತಿತೆರಿಗೆಯ ಶೇ 5  ರಿಯಾಯ್ತಿ ಜುಲೈ ಅಂತ್ಯದವರೆಗೆ ವಿಸ್ತರಣೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ಜೂ,11- ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸುವ ತೆರಿಗೆದಾರರಿಗೆ ಶೇಕಡ 5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ.
ಆಸ್ತಿ ತೆರಿಗೆ ಪಾವತಿಯ ರಿಯಾಯಿತಿ ಅವಧಿಯನ್ನು ಜುಲೈ 2024 ರವರೆಗೆ ವಿಸ್ತರಿಸಿರುವಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಂದ ಇಲಾಖೆಗೆ ಕೋರಿಕೆ ಸಲ್ಲಿಕೆಯಾಗಿತ್ತಯ.
ಜೊತೆಗೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ
ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರಿಂದ ಆಸ್ತಿ ತೆರಿಗೆ ಸಂಗ್ರದಲ್ಲಿ ಹಿನ್ನಡೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಯಿತಿ ದರದ ಪಾವತಿ ಅವಧಿಯನ್ನು ವಿಸ್ತರಿಸುವಂತೆ ಪೌರಾಡಳಿತ ನಿರ್ದೇಶನಾಲಯವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಇಲಾಖೆಯ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿರುವ ಸರ್ಕಾರ, ಶೇ 5ರ ರಿಯಾಯಿತಿ ದರದ ಆಸ್ತಿ ತೆರಿಗೆ ಪಾವತಿ ಅವಧಿಯನ್ನು ಜುಲೈ ಅಂತ್ಯದ ವರೆಗೆ ವಿಸ್ತರಿಸಿದೆ.
ಈ ಹಿಂದೆ ರಿಯಾಯಿತಿ ದರದ ತೆರಿಗೆ ಪಾವತಿಯನ್ನು ಏಪ್ರಿಲ್ ತಿಂಗಳಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು.