ಆಸ್ತಿ ತೆರಿಗೆ ದರ ಏರಿಕೆ ಖಂಡಿಸಿ ಪ್ರತಿಭಟನೆ

ಮೈಸೂರು:ಮಾ:31: ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆಯಿಂದ (ಏ:01) ಹೊಸ ಆಸ್ತಿ ತರಿಗೆ ದರ ಏರಿಸುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಇಂದು ಬೆಳಿಗ್ಗೆ ಮೈಸೂರು ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾಧ್ಯ ಮದವರೊಂರಿಗೆ ಮಾತನಾಡಿ, ದೇಶದ ಜನತೆ ಪೆಟ್ರೋಲ್, ಡೀಸಲ್, ಅಡುಗೆ ಅನಿಲಗಳ ಬೆಲೆಯಲ್ಲಿ ಏರಿಕೆಯಾಗಿರುವುದರಿಂದ ಈಗಾಗಲೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ.
ಈ ಸಂದರ್ಭದಲ್ಲಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಮೇಲೆ ಶೇ.15ರಷ್ಟು ಹೆಚ್ಚಿನ ತೆರಿಗೆ ವಿಧಿಸುತ್ತಿರುವುದು ಗಾಯದ ಮೇಲೆ ಬರೆ ಎಳೆದಂತ್ತಾಗಿದೆ. ಇದರಿಂದ ಜನತೆ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದು, ಮುಂದೆ ಆಗುವ ಎಲ್ಲಾ ರೀತಿಯ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದು ಆಪಾದಿಸಿದ ಪ್ರತಿಭಟನಾಕಾರರು ಸರ್ಕಾರವು ಈ ಕೂಡಲೆ ಈ ಆದೇಶವನ್ನು ಹಿಂದೆಗೆದುಕೊಳ್ಳಬೇಕ. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನರ ನಡೆಸಲಾಗುವುದೆಂದು ಎಚ್ಚರಿಕೆಯನ್ನು ಸಹ ನೀಡಿದರು.