ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ಸಿಗದೆ ಪರದಾಟ

ನವದೆಹಲಿ,/ ಮೀರತ್ . ಮೇ.೩- ದೇಶದಲ್ಲಿ ನಿತ್ಯ ಕೊರೋನಾ ಸೋಂಕು ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪತಿಯನ್ನು ಆಸ್ಪತ್ರೆಗೆ ಸೇರಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಮೊದಲ ಮಗುವಿನ ಜೊತೆ ಮೂರು ನಾಲ್ಕು ದಿನ ಅಲೆದ ಘಟನೆ ದೆಹಲಿಯಲ್ಲಿ ನಡೆದಿದೆ. ಪತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ.ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಿ ಎಂದರೂ ಯಾವ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಮಹಿಳೆ ಗೊಲ್ದಿ ಪಟೇಲ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ನಾಲ್ಕು ದಿನಗಳಿಂದ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲು ಹಿನ್ನೆಲೆಯಲ್ಲಿ ಪತಿಯ ಶ್ವಾಸಕೋಶದಲ್ಲಿ ಶೇಕಡ ೮೦ರಷ್ಟು ಸಮಸ್ಯೆಗೆ ಸದಾನಂದ್ ಪಟೇಲ್ ಸಮಸ್ಯೆಗೆ ಸಿಲುಕಿದ್ದರು ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತಿಲ್ಲ ದಿನದಿಂದ ದಿನಕ್ಕೆ ಅವರ ಸ್ಥಿತಿ ಬಿಗಡಾಯಿಸುತ್ತದೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ

ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕೊರೋನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ದೆಹಲಿ ಮೀರತ್ ಮಾತ್ರ ಅಲ್ಲ ದೇಶದ ವಿವಿಧ ಭಾಗಗಳಲ್ಲಿ ಇದೇ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಇದೊಂದು ಉದಾಹರಣೆ ಎಂದು ಹೇಳಲಾಗಿದೆ.

ದೇಶದಲ್ಲಿ ಸರಿ ಸುಮಾರು ಶೇಕಡ ೮೦ರಷ್ಟು ಆಸ್ಪತ್ರೆಗಳು ತುಂಬಿತುಳುಕುತ್ತಿದೆ ವೈದ್ಯರು ದಾದಿಯರು ಲಸಿಕೆಯ ಕೊರತೆ ಎದುರಾಗಿದೆ

ಆಸ್ಪತ್ರೆ ಹೊರಗೆ ಚಿಕಿತ್ಸೆ

ಬಹುತೇಕ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ವರಾಂಡದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಸ್ಥಿತಿ ನಿರ್ಮಾಣವಾಗಿದೆ ಇದು ದೇಶದ ರಾಜಕೀಯ ವ್ಯವಸ್ಥೆಗೆ ಕನ್ನಡಿ ಹಿಡಿದಿದೆ