ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ಕೊರತೆ ಇಲ್ಲ: ಡಿಸಿ

ತುಮಕೂರು ಜಿಲ್ಲೆಯಲ್ಲಿ ಏರಿಕೆಯಾಗುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ಸೇರಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡಲು ಯಾವುದೇ ಕೊರತೆ ಇಲ್ಲ. ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮನವಿ ಮಾಡಿದರು.