ಆಸ್ಪತ್ರೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ

ದೇವದುರ್ಗ.ಮೇ.೨೧-ಗ್ರಾಮೀಣ ಭಾಗದ ಎಲ್ಲ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರು, ಸಿಬ್ಬಂದಿ ಸೇರಿ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ವೈದ್ಯಾಧಿಕಾರಿ ಬನದೇಶ್ವರಗೆ ಶೃತಿ ಸಂಸ್ಕೃತಿ ಸಂಸ್ಥೆ ತಾಲೂಕು ಸಮಿತಿ ಪದಾಧಿಕಾರಿಗಳು ಗುರುವಾರ ಮನವಿ ಸಲ್ಲಿಸಿದರು.
ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಹಲವು ಸಮಸ್ಯೆ ಎದುರಿಸುತ್ತಿವೆ. ತಜ್ಞ ವೈದ್ಯರು, ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಿಗೆ ಅಲೆಯುವ ಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.
ಕೂಡಲೇ ರಾಮದುರ್ಗ, ಹಿರೇಬೂದೂರು, ಗಬ್ಬೂರು, ಮಸರಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಐಯಾಮ್ ವೈದ್ಯರನ್ನು ನೇಮಿಸಬೇಕು. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡಬೇಕು. ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕವಚ ನೀಡಬೇಕು. ಜುಲೈ ಅಂತ್ಯದೊಳಗೆ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಬೇಕು. ಕೋವಿ ಬಾಧಿತ ಮಕ್ಕಳಿಗೆ ಆರೈಕೆ ಹಾಗೂ ಚಿಕಿತ್ಸೆಗಾಗಿ ಪ್ರತ್ಯೇಕ ಆಸ್ಪತ್ರೆ ತೆಗೆಯಬೇಕು ಎಂದು ಒತ್ತಾಯಿಸಿದರು.
ತಾಲೂಕು ಸಂಯೋಜಕರಾದ ರಾಮಣ್ಣ ಗಣೇಕಲ್, ವೀರಮ್ಮ ಅಗಳಕೇರಾ, ಹನುಮಂತ ವಡ್ಡರ್, ರಂಗಪ್ಪ, ನಾಗರಾಜ, ರಾಮಣ್ಣ ದೊಡ್ಡಮನಿ ಇತರರು ಇದ್ದರು.