ಆಸ್ಪತ್ರೆಗೆ ಸಚಿವರ ಭೇಟಿ

ಗಂಗಾವತಿ ಎ.30:ಗಂಗಾವತಿ: ನಗರದ ಉಪ ವಿಭಾಗ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಕರೋನ ಎರಡನೇ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣ ಹಾಗೂ ಮುಂಜಾಗ್ರತಾ ಕೈಗೊಂಡಿರುವ ಕ್ರಮ ಹಾಗೂ ಅಲ್ಲಿ ಮಾಡಿಕೊಂಡಿರುವ ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಹಾಗೂ ಬೆಡ್ ವ್ಯವಸ್ಥೆ ಮಾಡಲಾಗಿದೆ. ಸಧ್ಯಕ್ಕೆ ಜಿಲ್ಲೆಯಲ್ಲಿ 350 ಬೆಡ್ ವ್ಯವಸ್ಥೆ ಮಾಡಿದ್ದು, ಅವಶ್ಯ ಇದ್ದರೆ, ಹೆಚ್ಚುವರಿ ವ್ಯವಸ್ಥೆ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಈಗಾಗಲೇ 1655 ಜನರನ್ನು ಐಸೋಲೇಶನ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕರೋನ ಪರಿಸ್ಥಿತಿ ಎದುರಿಸಲು ಜಿಲ್ಲಾ ಮತ್ತು ಆಯಾ ತಾಲೂಕು ಆಡಳಿತ ಸನ್ನದ್ದವಾಗಿದೆ ಎಂದು ತಿಳಿಸಿದರು.
ಅನ್ಯ ಜಿಲ್ಲೆಯಿಂದ ಸ್ವಗ್ರಾಮಕ್ಕೆ ಆಗಮಿಸುವ ಜನರು ಕೋವಿಡ್ ಟೈಸ್ಟ್ ಮಾಡಿಸಿ, ಮನೆಗೆ ಹೋಗಬೇಕು. ಹಳ್ಳಿಗಳಿಗೆ ಕರೋನ ಸೋಂಕು ಹರಡದಂತೆ ಮುಂಜಾಗ್ರತಾ ವಹಿಸುವಂತೆ ಅಧಿಕಾರಿಗಳು ತಾಕೀತು ಮಾಡಲಾಗಿದೆ ಎಂದರು.
ಕರೋನ ಎರಡನೇ ಅಲೆ ನಿಯಂತ್ರಿಸುವ ಉದ್ದೇಶದಿಂದ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ ಶಾಸಕರಾದ ಪರಣ್ಣ ಮುನವಳ್ಳಿ,ರಾಘವೇಂದ್ರ ಹಿಟ್ನಾಳ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಇದ್ದರು.