ಆಸ್ಪತ್ರೆಯಿಂದ ಸಿಎಂ ಡಿಸ್ಚಾರ್ಜ್


ಬೆಂಗಳೂರು,ಏ.೨೨- ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾದರು.
ಕಳೆದ ಶುಕ್ರವಾರ ಕೋವಿಡ್ ಸೋಂಕಿಗೆ ಒಳಗಾಗಿ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ಈಗ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಆರೋಗ್ಯ ಪರೀಕ್ಷಿಸಿದ ವೈದ್ಯರು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವುದನ್ನು ಖಚಿತಪಡಿಸಿಕೊಂಡು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದ್ದು, ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಮನೆಗೆ ಮರಳಿದರು.
ಆಸ್ಪತ್ರೆಯಿಂದ ಹೊರ ಬರುವ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮಗೆ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು ಎಲ್ಲರಿಗೂ ಕೈ ಮುಗಿದು ಧನ್ಯವಾದ ಹೇಳಿದರು.