ಆಸ್ಪತ್ರೆ ಕಟ್ಟಡದಿಂದ ಜಿಗಿದ ಕೋವಿಡ್‌ ಸೋಂಕಿತ: ಅಪಾಯದಿಂದ ಪಾರು

ಮಂಗಳೂರು, ಮೇ ೪- ವೆನ್ಲಾಕ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತ ಯುವಕನೋರ್ವ ಆಸ್ಪತ್ರೆಯ ಕಟ್ಟಡದಿಂದ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಸುಮಾರು 30 ವರ್ಷದ ಯುವಕ ವೆನ್ಲಾಕ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಮಧ್ಯಾಹ್ನ ವಾರ್ಡ್‌ನ ಕಿಟಿಕಿಯ ಮೂಲಕ ಜಿಗಿದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಿಂದ ಯುವಕ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ ಖಿನ್ನತೆಗೊಳಗಾಗಿ ಕೃತ್ಯ ಎಸೆಗಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತವಾಗಿದೆ.