ಆಸ್ಪತ್ರೆ ಸೇರುವ ನೆಪ‌ ರಾಗಿಣಿಗೆ ನಿರಾಸೆ

ಬೆಂಗಳೂರು,ಸೆ.14-ನಶೆ ನಂಟು ಪ್ರಕರಣಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸುತ್ತಿದ್ದಂತೆ ನಟಿ ರಾಗಿಣಿ ತನಗೆ ಅನಾರೋಗ್ಯ ಸಮಸ್ಯೆ ಇದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಡ್ರಗ್ ಜಾಲದಲ್ಲಿ ಭಾಗಿಯಾಗಿರುವ ನಟಿ ಸಂಜನಾ ಹೊರತು ಪಡಿಸಿ ನಟಿ ರಾಗಿಣಿ ಸೇರಿದಂತೆ ಐವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ನಟಿ ರಾಗಿಣಿ ತನಗೆ ಬೆನ್ನು ನೋವು ಹಾಗೂ ಅಸ್ತಮಾ ಸಮಸ್ಯೆಯಿದ್ದು ತನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಆದರೆ ರಾಗಣಿ ಮನವಿಯನ್ನು ಒಪ್ಪದ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯಲ್ಲಿ ವೈದ್ಯರು ಲಭ್ಯವಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುವಂತೆ ಹೇಳಿದ್ದಾರೆ. ಅಲ್ಲದೇ ಜೈಲು ಆಸ್ಪತ್ರೆಯಲ್ಲಿ ರಾಗಿಣಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ರಾಗಿಣಿ ಪರ ವಕೀಲರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.