
ಕಲಬುರಗಿ:ಜು.26: ಕೇಂದ್ರ ಸರ್ಕಾರ ಆಹಾರ ಪದಾರ್ಥ ಹಾಗೂ ಅಗತ್ಯ ವಸ್ತುಗಳ ಮೇಲೆ ಜಿಎ???ಟಿ ವಿಧಿಸಿರುವ ಕ್ರಮವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಲಬುರ್ಗಿ ಜಿಲ್ಲಾ ಸಮಿತಿ ಖಂಡಿಸಿದೆ.
ಅಕ್ಕಿ, ಜೋಳ ರಾಗಿ ಮುಂತಾದ ಆಹಾರ ಧಾನ್ಯಗಳ ಮೇಲೆ, ಡೈರಿ ಉತ್ಪನ್ನಗಳ ಮೇಲೆ ಕೇಂದ್ರ ಜಿಎ???ಟಿ ಮಂಡಳಿಯು ಶೇ 5ರಷ್ಟು ತೆರಿಗೆ ವಿಧಿಸಿದ್ದು ಸರಿಯಲ್ಲ. ಈಗಾಗಲೇ ಜನರು ಬೆಲೆ ಏರಿಕೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಆದಾಯವೂ ಹೆಚ್ಚಳವಾಗಿಲ್ಲ. ಈಗ ತಿನ್ನುವ ಅನ್ನದ ಮೇಲೂ ತೆರಿಗೆ ವಿಧಿಸುವ ಮೂಲಕ ಕೇಂದ್ರ ಸರ್ಕಾರವು ಕ್ರೂರ ಕ್ರಮಕ್ಕೆ ಮುಂದಾಗಿದೆ ಎಂದು ದೂರಿದರು.
ಆಹಾರ ಪದಾರ್ಥಗಳ ವ್ಯಾಪಾರದಲ್ಲಿಯೂ ಕಾಪೆರ್Çೀರೇಟ್ ಕಂಪನಿಗಳಿಗೆ ಅನುಕೂಲ ಮಾಡಿರುವ ಈ ತೀರ್ಮಾನ ಮಾಡುವ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಕೂಡಲೇ ಆಹಾರ ಪದಾರ್ಥಗಳ ಮೇಲೆ ವಿಧಿಸಿರುವ ತೆರಿಗೆಯನ್ನು ಕೂಡಲೇ ಹಿಂಪಡೆಯಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಲಬುರ್ಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಬಿನ್ ಅಹಮದ್ ಎಚ್ಚರಿಸಿದರು.