ಆ.೦೩ ಸಿದ್ದರಾಮೋತ್ಸವ ಪೂರ್ವಭಾವಿ ಸಭೆ

ರಾಯಚೂರು.ಜು.೨೦- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೫ ನೇ ಹುಟ್ಟು ಹಬ್ಬ ಅಂಗವಾಗಿ ಆಗಸ್ಟ್ ೦೩ ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಉತ್ಸವ ಗಾರ್ಡನ್‌ನಲ್ಲಿ ನಡೆಯಿತು.
ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಜಿಲ್ಲಾ ಕುರುಬರ ಸಂಘದ ವತಿಯಿಂದ ಈ ಸಭೆ ನಡೆಸಲಾಯಿತು. ಸಭೆಯಲ್ಲಿ ಕುರುಬರ ಸಮಾಜಕ್ಕೆ ಸೇರಿದಂತೆ ಇತರೆ ಹಿಂದುಳಿದ ಮತ್ತು ಪರಿಶಿಷ್ಟ ಪಂಗಡ ನಾಯಕರು ಪಾಲ್ಗೊಂಡಿದ್ದರು. ಆಗಸ್ಟ್ ೦೩ ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅವರ ೭೫ ನೇ ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಈ ಕಾರ್ಯಕ್ರಮದಲ್ಲಿ ಗಂಭೀರ ಚರ್ಚೆ ನಡೆಯಿತು. ಅತ್ಯಧಿಕ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಹಾಜರಾಗುವ ಮೂಲಕ ಹಿಂದುಳಿದ ನಾಯಕರಾದ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹೇಳಲಾಯಿತು.
ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ. ಹಾಗೂ ಸಿದ್ದರಾಮಯ್ಯರಂತಹ ನಾಯಕರು ಇಂದು ಸಮಾಜಕ್ಕೆ ಅಗತ್ಯವೆಂದು ಸಭೆಯಲ್ಲಿ ಹೇಳಲಾಯಿತು.
ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ರಾಮಚಂದ್ರಪ್ಪ, ಪ್ರದೇಶ ಕುರುಬರ ಸಂಘಜ ರಾಜ್ಯಾಧ್ಯಕ್ಷ ಸುಬ್ರಮಣ್ಯಂ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಕೆ.ಬಸವಂತಪ್ಪ, ಗಂಗಾಮತ ಸಮಾಜದ ಅಧ್ಯಕ್ಷರಾದ ಕೆ.ಶಾಂತಪ್ಪ, ಎಂ.ಈರಣ್ಣ, ಕೆ.ಪಂಪಾಪತಿ, ನೀಲಕಂಠ, ಸಿದ್ದರಾಮ ನೀರಮಾನ್ವಿ, ಜಿ.ಸುರೇಶ, ಬಿ.ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.