ಆ.೧೩ ರಂದು ದಾವಣಗೆರೆ ಜಿಲ್ಲಾ  ಶಿವಸಿಂಪಿ‌ ಸಮಾವೇಶ- ೨೦೨೩

ಸಂಜೆವಾಣಿ ವಾರ್ತೆ
ದಾವಣಗೆರೆ. ಆ.೧೦; ದಾವಣಗೆರೆ ಜಿಲ್ಲಾ ಶಿವಸಿಂಪಿ ಸಮಾವೇಶ- ೨೦೨೩,ಕುಲಗುರು ಶರಣ ಶ್ರೀ ಶಿವದಾಸಿಮಯ್ಯ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.೧೩ ರಂದು ಬೆಳಗ್ಗೆ ೧೦ ಕ್ಕೆ ನಗರದ ಆವರಗೆರೆ ಹತ್ತಿರವಿರುವ ಶಂಕರಲೀಲ  ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಬೂಸ್ನೂರು ಗುರುಬಸಪ್ಪ ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುಮಕೂರು ಸಿದ್ದಗಂಗಾಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮಿ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ ಚಿತ್ರದುರ್ಗ ಮುರುಘಾಮಠದ ಶ್ರೀ ಬಸವಪ್ರಭು ಸ್ವಾಮಿಜಿ ಸಾನಿಧ್ಯ ವಹಿಸಲಿದ್ದಾರೆ.ವಿಶೇಷ ಆಹ್ವಾನಿತರಾಗಿ ಚಿತ್ರನಟ ದೊಡ್ಡಣ್ಣ ಆಗಮಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್,ಸಮಾಜದ ಗೌರವಾಧ್ಯಕ್ಷ ಸಿ.ಎಲ್ ಚಂದ್ರಧರ್ ಆಗಮಿಸಲಿದ್ದಾರೆ.ತುಮಕೂರು ವಿವಿಯ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಡಾ.ಎಂ ಕೊಟ್ರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾ ರೆಂದರು. ಸುದ್ದಿಗೋಷ್ಠಿಯಲ್ಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಬೂಸ್ನೂರು ಪ್ರಕಾಶ್,ಸಹ ಕಾರ್ಯದರ್ಶಿ ಜ್ಞಾನೇಶ್ವರ ಜವಳಿ,ಮಾಜಿ ಅಧ್ಯಕ್ಷ ಹೆಚ್.ಕೆ ಹೇಮಣ್ಣ,ಮಾಜಿ ಪ್ರಧಾನ‌ಕಾರ್ಯದರ್ಶಿಗಳಾದ ಬಿ.ಎಂ ಶಿವಕುಮಾರ್,ಜಗದೀಶಪ್ಪ ಬಾವಿಕಟ್ಟಿ ಉಪಸ್ಥಿತರಿದ್ದರು.