ಆ.೨೪: ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ರಾಯಚೂರು,ಆ.೨೧- ಕಾರ್ಮಿಕರ ಬಾಕಿ ಶೈಕ್ಷಣಿಕ ಧನ ಸಹಾಯ ಬಿಡುಗಡೆಗೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೨೪ ರಂದು ದೇಶಾದ್ಯಂತ ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಶಬ್ಬೀರ್ ಜಾಲಹಳ್ಳಿ ಹೇಳಿದರು.
ಅವರಿಂದ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,
ಕಾರ್ಮಿಕರ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ – ೧೯೯೬ ಮತ್ತು ನೆಸ್ ಕಾಯ್ದೆ – ೧೯೯೬ರ ಕಾಯ್ದೆ ಹಾಗೂ ಅಂತರರಾಜ್ಯ ಕಾರ್ಮಿಕರ ಕಾಯಿದೆ ೧೯೭೯ರ ಕಾಯ್ದೆಯನ್ನು ಅನ್ನು ಬಲಪಡಿಸಸಲು ಸುಮಾರು ದಿನಗಳಿಂದ ಒತ್ತಾಯ ಮಾಡಿದರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.ಅದರಂತೆ ಎಲ್ಲಾ ಕಟ್ಟಡ ಕಾರ್ಮಿಕರಿಗೆ ತಿಂಗಳು ಕನಿಷ್ಠ ವೇತನ ೨೬೦೦೦ ರೂ. ಮತ್ತು ಪಿಂಚಣಿ ೧೦೦೦೦ ರೂ, ಖಾತ್ರಿಪಡಿಸಬೇಕು ನಿರ್ಮಾಣ ಸಾಮಗ್ರಿಗಳು ಮತ್ತು ಸಲಕರಣೆಗಳ ಬೆಲೆಗಳನ್ನು ನಿಯಂತ್ರಣ ಮಾಡಬೇಕು, ಸೆಸ್ ಸರಿಯಾದ ಸಂಗಹಕ್ಕೆ ಕ್ರಮವಹಿಸಿ ಸೆಸ್ ವಂಚನೆ ತಡೆಗಟ್ಟಿ ಮತ್ತು ಸಸ್ ದುರ್ಬಳಿಕೆ ನಿಲ್ಲಿಸಿ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸಬೇಕು ಹಾಗೂ ದೇಶದ ಎಲ್ಲ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಗಳಲ್ಲಿ ಸಿಐಟಿಯು ಸೇರಿ ಹಾಗೂ ಕೇಂದ್ರ ಕಾರ್ಮಿಕ ಸಂಘಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಿ ಕಾರ್ಮಿಕ ಕಾಯಿದೆ ಅಡಿಯಲ್ಲಿ ನಿರ್ಮಾಣೇತರ ಕಾರ್ಮಿಕ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಮತ್ತು ನಕಲಿ ಕಾರ್ಡುಗಳ ಹಾವಳಿ ತಡೆಗಟ್ಟಿ ಸೇರಿ ವಿವಿಧ ಬೇಡಿಕೆಗಳನ್ನು ನೀಡಲು ಒತ್ತಾಯಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರುದ್ರಪ್ಪ ನಾಯಕ್, ಯೂಸುಫ್ ಗ್ವಾಡಿಕಾರ,ಅನ್ವರ್ ಪಾಷಾ,ವೆಂಕಟೇಶ್, ಲಿಂಗಪ್ಪ ಇದ್ದರು.