ಆ.೨೫ ಮೋದಿ ಗ್ರೀಸ್‌ಗೆ ಭೇಟಿ

ನವದೆಹಲಿ,ಆ.೧೯- ಭಾರತ-ಗ್ರೀಸ್ ದೇಶಗಳ ನಡುವೆ ಸಂಬಂಧ ಸುಧಾರಣೆ, ದ್ವಿಪಕ್ಷೀಯ ಚರ್ಚೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಾಲೋಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇದೇ ೨೫ ರಂದು ಗ್ರೀಸ್‌ಗೆ ಭೇಟಿ ನೀಡಲಿದ್ದಾರೆ.ಸರಿ ಸುಮಾರು ೪ ದಶಕಗಳ ನಂತರ ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ಗೆ ಭೇಟಿ ನೀಡುತ್ತಿದ್ದಾರೆ. ಆ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿ ಅವರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗ್ರೀಸ್ ಪ್ರಧಾನಿ ಮಿತ್ಸೋಟಾಕಿಸ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ಎರಡೂ ದೇಶಗಳ ಉದ್ಯಮಿಗಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದೆ.
೪೦ ವರ್ಷಗಳಲ್ಲಿ ಯುರೋಪಿಯನ್ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ಸರ್ಕಾರದ ಮುಖ್ಯಸ್ಥರು ಎನ್ನುವ ಹಿರಿಮೆ ಪ್ರಧಾನಿ ನರೇಂದ್ರ ಮೋದಿ ಅವರದು ಎಂದು ಹೇಳಿಕೆಯಲ್ಲಿ ತಿಳಿಸಿದೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಮುಕ್ತಾಯದ ನಂತರ, ಪ್ರಧಾನಿ ಮೋದಿ ಆಗಸ್ಟ್ ೨೫ ರಂದು ತಮ್ಮ ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ ಗ್ರೀಸ್‌ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದೆ.