ಆ.೨೬ ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸಂಜೆವಾಣಿ ವಾರ್ತೆ

ದಾವಣಗೆರೆ.ಆ.೨೪: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನ  ವತಿಯಿಂದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಕೊಡಮಾಡುವ ಪ್ರಶಸ್ತಿಗೆ ವಚನ ಸಾಹಿತ್ಯ ಹಾಗೂ ಸಂಶೋಧನೆ, ಸಾಮಾಜಿಕ ಅಥವಾ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಸಾಧಕರನ್ನು ಗುರುತಿಸಿ ಪ್ರದಾನ ಮಾಡಲಾಗುವುದು ಎಂದರು.ಸಮಾರಂಭದ ಸಾನ್ನಿಧ್ಯವನ್ನು ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು ವಹಿಸಲಿದ್ದು, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ನುಡಿಗಳನ್ನು ಕಸಾಪ ನಿಕಟಪೂರ್ವ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್  ನಡೆಸಿಕೊಡಲಿದ್ದಾರೆ ಎಂದರು.ಪ್ರಶಸ್ತಿಯನ್ನು  ಮಾಜಿ ಸಚಿವೆ ಡಾ. ಬಿ.ಟಿ. ಲಲಿತಾ ನಾಯಕ್ ಗೆ ಪ್ರದಾನ ಮಾಡಲಾಗುವುದು. ಮಾಗನೂರು ಬಸಪ್ಪ ನವರ ವ್ಯಕ್ತಿತ್ವ ಕುರಿತು ಡಾ. ಹೆಚ್.ಎಸ್. ಮಂಜುನಾಥ್ ಕುರ್ಕಿ ಮಾತನಾಡಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುವರು ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ, ಬಿ. ದಿಳ್ಳೆಪ್ಪ, ಎಸ್ ಆರ್. ಶಿರಗುಂಬಿ, ಎನ್.ಟಿ. ಯರ್ರಿಸ್ವಾಮಿ ಹಾಗೂ ಮಂಜುನಾಥ್ ಉಪಸ್ಥಿತರಿದ್ದರು.