ಆ. 1 ರಿಂದ ನಂದಿನಿ ಹಾಲಿನ ದರ ಲೀಟರ ಒಂದಕ್ಕೆ ರೂ. 3 ಹೆಚ್ಚಳಕ್ಕೆ ಹರ್ಷ

ಕಲಬುರುಗಿ: ಜು. 24: ಇತ್ತೀಚಿಗೆ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಸಭೆ ಜರುಗಿತ್ತು. ಸಭೆಯಲ್ಲಿ ‘ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ. 3/- ರಂತೆ ಹೆಚ್ಚಳಕ್ಕೆ ಸಮ್ಮತಿ ನೀಡಿ ಆಗಸ್ಟ್ 01, 2023’ ರಿಂದ ಜಾರಿಗೆ ತರುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಅದಕ್ಕೆ ಅನುಮೋದನೆ ನೀಡಲಾಗುವುದೆಂದು ಹಾಗೂ ಹೆಚ್ಚುವರಿ ಮಾಡುವ ಮಾರಾಟ ದರದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಹಿಸಲು ತಿಳಿಸಿದರು.
ನಂದಿನ ಹಾಲಿನ ಮಾರಾಟ ದರ ಹೆಚ್ಚಳದ ಪ್ರಸ್ತಾವನೆ ಸಮ್ಮತಿ ನೀಡಿರುವ ರಾಜ್ಯ ಸರ್ಕಾರಕ್ಕೆ ನಾಡಿನ ಸಮಸ್ತ ಹೈನುಗಾರಿಕೆ ರೈತರ ಪರವಾಗಿ ಅಧ್ಯಕ್ಷರಾದ ಶ್ರೀ ಭೀಮನಾಯ್ಕ್ ರವರು, ಮಹಾಮಂಡಳದ ನಿರ್ದೇಶಕರುಗಳು ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರುಗಳು, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೆ ಹಾಗೂ ಸಹಕಾರ ಸಚಿವರಾದ ಶ್ರೀ ಕೆ.ಎನ್.ರಾಜಣ್ಣರವರು ಮತ್ತು ಪಶು ಸಂಗೋಪನೆ ಸಚಿವರಾದ ಶ್ರೀ ಕೆ. ವೆಂಕಟೇಶ್ ರವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ. ಎಂದು ಕಲಬುರಗಿ ಬೀದರ ಹಾಗೂ ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ನಿ) ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.