ಆ. 13ಕ್ಕೆ ಕ್ರಾಸ್ ಕಂಟ್ರಿ ಸ್ಪರ್ಧೆ

ಧಾರವಾಡ, ಆ 3: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – 2022ರ ಅಂಗವಾಗಿ ರಾಷ್ಟ್ರಮಟ್ಟದ ಆಟಗಾರ್ತಿ ದಿವಂಗತ ಕಲ್ಲವ್ವ ಸಿಂಧೋಗಿ ಸ್ಮರಣಾರ್ಥ ರಾಜ್ಯ ಮಟ್ಟದ 10 ಕಿ.ಮೀ ಕ್ರಾಸ್ ಕಂಟ್ರಿ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಶಿವು ಹಿರೇಮಠ ತಿಳಿಸಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಇದೆ ದಿ. ಆಗಸ್ಟ್ 13ಕ್ಕೆ ಕ್ರಾಸ್ ಕಂಟ್ರಿ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ರಾಜ್ಯದ ಆಸಕ್ತ ಕ್ರೀಡಾಪಟುಗಳು ಭಾಗವಹಿಸಬಹುದು. ಆರು ಸ್ಥಾನಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಕೊಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಬಸವರಾಜ ತಾಳಿಕೋಟಿ, ಕೆ. ಎಸ್. ಭೀಮ್ಮಣ್ಣವರ, ವಿಜಯಾನಂದ ಶೆಟ್ಟಿ ಸೇರಿದಂತೆ ಹಲವರು ಇದ್ದರು.