ಆ.13 ರಿಂದ 15ರವರೆಗೆ ಹರ್‍ಘರ್ ತಿರಂಗಾ ಅಭಿಯಾನ: ವಿ.ಸೋಮಣ

ಚಾಮರಾಜನಗರ, ಆ.03:- ಸಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆ.13 ರಿಂದ 15ರವರೆಗೆ ಜಿಲ್ಲೆಯಲ್ಲಿ ಹರ್‍ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಮನೆ ಮನೆಗಳಲ್ಲಿ, ಸರ್ಕಾರಿ ಕಚೇರಿ, ಕೈಗಾರಿಕೆ, ಅಂಗಡಿ, ವಾಣಿಜ್ಯ ಸಂಕಿರ್ಣಗಳಲ್ಲಿ, ವಸತಿ ಸಮುಚ್ಚಯ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಿದ್ದು, ಈ ಮಹತ್ತರವಾದ ಕಾರ್ಯಕ್ರಮಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಸತಿ, ಮೂಲ ಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.
ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಹರ್‍ಘರ್‍ತಿರಂಗಾ ಅಭಿಯಾನದ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿಯುವ ಪೀಳಿಗೆ ಮತ್ತು ಎಲ್ಲಾ ಭಾರತೀಯರಿಗೂ ದೇಶಕ್ಕೆ ಸ್ವಾತಂತ್ರ್ಯ ಬಂದ ನೆನಪುಗಳನ್ನು ತಿಳಿಸಿಕೊಡಬೇಕಿದೆ. ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನದ ಕಾರಣದಿಂದ ಭಾರತಕ್ಕೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವ ಸಂಭ್ರಮ. ಈ ಸಮಯದಲ್ಲಿ ಇದಕ್ಕೆ ಕಾರಣರಾದ ಎಲ್ಲರನ್ನೂ ಸ್ಮರಿಸಿ ಗೌರವಿಸುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದರು.
ಪ್ರತಿ ಕುಟುಂಬಗಳು, ಸರ್ಕಾರಿ ಕಚೇರಿಗಳು, ಅಂಗಡಿಗಳು, ವಾಣಿಜ್ಯ ಸಂಕಿರ್ಣಗಳು, ಕೈಗಾರಿಕೆಗಳು, ವಸತಿ ಸಮುಚ್ಚಯಗಳ ಕಟ್ಟಡಗಳ ಮೇಲೆ ಧ್ವಜ ಹಾರಿಸಬೇಕು. ಜಿಲ್ಲೆಯಲ್ಲಿಈಗಾಗಲೇ ಸ್ವ ಸಹಾಯ ಸಂಘದ ಮಹಿಳೆಯರಿಂದ 80 ಸಾವಿರ ರಾಷ್ಟ್ರ ಧ್ವಜವನ್ನು ತಯಾರಿಸುವ ಕಾರ್ಯ ಪ್ರÀಗತಿಯಲ್ಲಿದೆ. ಪ್ರತೀ ಗ್ರಾಮ ಪಂಚಾಯಿತಿಯು ರಾಷ್ಟ್ರ ಧ್ವಜಗಳನ್ನು ಗ್ರಾಮ ಪಂಚಾಯಿತಿ ಒಕ್ಕೂಟ ಅಥವಾ ಸ್ವ-ಸಹಾಯ ಸಂಘದ ಮಹಿಳೆಯರಿಂದ ಖರೀದಿಸಲಿದೆ. ಪ್ರತೀಗ್ರಾಮ ಪಂಚಾಯಿತಿಯು ತಮ್ಮ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಚೇರಿಗಳಿಗೆ ಉಚಿತವಾಗಿ ರಾಷ್ಟ್ರಧ್ವಜವನ್ನು ನೀಡಲಿದೆ. ಪ್ರತೀಗ್ರಾಮ ಪಂಚಾಯಿತಿಯು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಗೆ ರಾಷ್ಟ್ರಧ್ವಜವನ್ನು ಮಾರಾಟ ಮಾಡಲಿದೆ ಎಂದು ಸಚಿವರು ತಿಳಿಸಿದರು.
ಶಾಲಾ ಮಕ್ಕಳೊಂದಿಗೆ ಆಗಸ್ಟ್ 11 ರಿಂದ 15ರವರೆಗೆ ಅಮೃತ ಮಹೋತ್ಸವ ಹಾಗೂ ಹರ್‍ಘರ್ ತಿರಂಗಾ ಅಭಿಯಾನ ಸಂಬಂಧ ಮೆರವಣಿಗೆ, ಜಾಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸರ್ಕಾರಿ ನೌಕರರು, ಶಿಕ್ಷಕರು, ಸಮಾಜ ಸೇವಕರು, ಸ್ವ ಸಹಾಯ ಸಂಘದ ಮಹಿಳೆಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಈ ಅಭಿಯಾನದ ಪ್ರಚಾರಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ರಾಷ್ಟ್ರಧ್ವಜವನ್ನು ಅಧಿಕಾರಿಗಳಿಗೆ ವಿತರಿಸಿದರು.