ಆ.13 ರಿಂದ 15 ರವರೆಗೆ ಪ್ರತಿ ಮನೆ ಮನೆಯಲ್ಲೂರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಬಿಂಬಿಸಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ ಜು.23: ಭಾರತ ಸ್ವಾತಂತ್ರ್ಯದ 75ರ ಸಂಭ್ರಮದ ಭಾಗವಾಗಿ ಕೇಂದ್ರ ಸರಕಾರವು ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಅಸಂಖ್ಯಾತ ಹೋರಾಟ, ತ್ಯಾಗ ಬಲಿದಾನಗಳ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಭಾರತಾಂಬೆಗೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವ ಸಂಭ್ರಮ.

ಎಲ್ಲರನ್ನು ಸದಾ ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿರುವುದರಿಂದ ಆಗಸ್ಟ್.13 ರಿಂದ 15 ರವರೆಗೆ ದೇಶದ ಪ್ರತಿ ಮನೆ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸಲು ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿರುವುದರಿಂದ ಈ ಅಭಿಯಾನದಲ್ಲಿ ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿಗಳಿಂದ ಹಾಗೂ ವಿಶೇಷವಾಗಿ ಗ್ರಾಮ ಪಂಚಾಯತಿಗಳಿಂದ ತಮ್ಮ ಕಾರ್ಯವ್ಯಾಪ್ತಿಯಲ್ಲಿನ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ ನಿಗಮ ಮಂಡಳಿಗಳು ಸಾರ್ವಜನಿಕ ಉದ್ಯಮಗಳು ಸ್ವಸಹಾಯ ಗುಂಪುಗಳು ನಾಗರಿಕ ಸಂಸ್ಥೆಗಳು ಸಾರ್ವಜನಿಕರು, ಶಾಲಾ, ಕಾಲೇಜು ಮಕ್ಕಳು ಇತರೆ ಎಲ್ಲಾ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ವರ್ಗದವರ ಜೊತೆ ಭಾಗವಹಿಸಬೇಕು.

ಸದರಿ ಕಾರ್ಯಕ್ರಮದ ಕುರಿತು ಶಾಲಾ ಮಕ್ಕಳೊಂದಿಗೆ ಸ್ಥಳೀಯವಾಗಿ ಮೆರವಣಿಗೆಯನ್ನು ಆಗಸ್ಟ್.11 ರಿಂದ 15 ರವರೆಗೆ ಆಯೋಜಿಸಬೇಕು. ಮೆರವಣಿಗೆಯಲ್ಲಿ ವಂದೇ ಮಾತರಂ ರಘುಪತಿ ರಾಘವ ಹಾಜಾರಂ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಗೀತೆಗಳನ್ನು ಹಾಡುವುದು.

ಪ್ರಯುಕ್ತ ಎಲ್ಲರೂ ತಮ್ಮ ಸ್ವಂತ ಖರ್ಚಿನಲ್ಲಿ ರಾಷ್ಟ್ರಧ್ವಜವನ್ನು ಖರೀದಿಸಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕೆಂದು ಬೀದರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.