ಆ. 19 ರಂದು ಗ್ರಾಹಕರ ಕುಂದು ಕೊರತೆ ಸಭೆ

ಕಲಬುರಗಿ,ಆ.17:ಕಲಬುರಗಿ ಜೆಸ್ಕಾಂ ವಿಭಾಗೀಯ ಕಚೇರಿ-1ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಗ್ರಾಮೀಣ, ಆಳಂದ, ಕಡಗಂಚಿ, ಅಫಜಲಪೂರ ಹಾಗೂ ಚೌಡಾಪೂರ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಇದೇ ಆಗಸ್ಟ್ 19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೆಳಕಂಡ ಉಪವಿಭಾಗಗಳ ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಕಲಬುರಗಿ ಗ್ರಾಮೀಣ ಉಪವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಜೆಸ್ಕಾಂ ಕಾರ್ಯ ಮತ್ತು ಪಾಲನೆ ಕಲಬುರಗಿ ಗ್ರಾಮೀಣ ಉಪವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರ ಇವರ ಅಧ್ಯಕ್ಷತೆಯಲ್ಲಿ ಕಲಬುರಗಿ ಗ್ರಾಮೀಣ, ಆಳಂದ, ಕಡಗಂಚಿ, ಅಫಜಲಪುರ ಹಾಗೂ ಚೌಡಾಪುರ ಉಪವಿಭಾಗಗಳ ಕಚೇರಿಗಳಲ್ಲಿ ಗ್ರಾಹಕರ ಕುಂದುಕೊರತೆ ಸಭೆ ಜರುಗಲಿದೆ.

ಸಾರ್ವಜನಿಕರು ತಮ್ಮ ಸ್ಥಾವರಗಳÀ ವಿದ್ಯುತ ಸಂಬಂಧಿತ ಸಮಸ್ಯೆ ನಿವಾರಣೆಗಾಗಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.