ಆ. 20 ಡಿ.ದೇವರಾಜ್ ಅರಸು ಜನ್ಮದಿನಾಚರಣೆ-ಪೂರ್ವಭಾವಿ ಸಭೆ

ಕೋಲಾರ, ಆ,೧೨-ಡಿ.ದೇವರಾಜ್ ಅರಸು ಅವರ ೧೦೮ನೇ ಜನ್ಮ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ್ ಅರಸು ಅವರ ೧೦೮ನೇ ಜನ್ಮ ದಿನಾಚರಣೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಡಿ.ದೇವರಾಜ್ ಅರಸು ಅವರ ೧೦೮ನೇ ಜನ್ಮ ದಿನಾಚರಣೆಯು ಆಗಸ್ಟ್ ೨೦ ರಂದು ಜಿಲ್ಲೆಯಲ್ಲಿ ಬಹಳ ಅದ್ದೂರಿಯಿಂದ ಆಚರಿಸೋಣ ಎಂದು ಹೇಳಿದರು.
ಅಂದು ಬೆಳಿಗ್ಗೆ ೧೦ ಗಂಟೆಗೆ ಡಿ ದೇವರಾಜ ಅರಸು ಭವನದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಾಜಿ ಮುಖ್ಯ ಮಂತ್ರಿ ಡಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ಹಾಗೂ ಡಿ ದೇವರಾಜ್ ಅರಸು ಅವರ ಭಾವಚಿತ್ರದೊಂದಿಗೆ ನಗರದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಕಾರ್ಯಕ್ರಮ ಹಾಗೂ ಜನ್ಮದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಲಾತಂಡದ ತಂಡಗಳಾದ ತಮಟೆ ವಾದ್ಯ, ವೀರಗಾಸೆ ಇತ್ಯಾದಿ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿಯೋಜಿಸಲಾಗಿದೆ,
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವಾಸಂಗ ಮಾಡಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿರುವ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಗುವುದು.
ವೇದಿಕೆಯಲ್ಲಿ ಗಣ್ಯರಿಗೆ ಹೂಗುಚ್ಚ, ಹಣ್ಣಿನ ಬುಟ್ಟಿ, ಸನ್ಮಾನ ಇನ್ನು ಇತರೆ ಮಾಡಬಾರದು ಎಂದು ಸರ್ಕಾರ ಆದೇಶದಂತೆ ಎಲ್ಲರೂ ಇದನ್ನು ಚಾಚು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು ಹಾಗೂ ಇದರ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀಮತಿ ಸೋನಿಯಾ ವರ್ಣೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀನಿವಾಸರೆಡ್ಡಿ, ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಪ್ರಸಾದ್ ಬಾಬು ಹಾಗೂ ಜಿಲ್ಲಾ ಮಟ್ಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.