ಆ.3 ಕೃಷಿ ವಿವಿಯ 57ನೇ ಘಟಿಕೋತ್ಸವ

ಬೆಂಗಳೂರು,ಆ.೧-ಬೆಂಗಳೂರು ಕೃಷಿ ವಿವಿ ವಿಶ್ವವಿದ್ಯಾನಿಲಯದ ೫೭ನೇ ಘಟಿಕೋತ್ಸವ ಕಾರ್ಯಕ್ರಮ ಆಗಸ್ಟ್ ೩ ರಂದು ನಗರದ ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೃಷಿ ವಿವಿ ಕುಲಪತಿ ಡಾ.ಎಸ್.ವಿ ಸುರೇಶ್ ಶೈಕ್ಷಣಿಕ ವರ್ಷ ೨೦೨೧-೨೨ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ೫೭ನೇ ಘಟಿಕೋತ್ಸವದಲ್ಲಿ ಒಟ್ಟಾರೆ ೧೨೯೫ ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುತ್ತಿದೆ. ಅದರಲ್ಲಿ, ೮೯೧ ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, ೨೯೯ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ ೧೦೫ ವಿದ್ಯಾರ್ಥಿಗಳು ಡಾಕ್ಟೊರಲ್ ಪದವಿಗಳನ್ನು ಪಡೆಯಲಿದ್ದಾರೆ. ಇದೇ ಸಮಾರಂಭದಲ್ಲಿ ಡಾಕ್ಟರ್ ಆಫ್ ಫಿಲಾಸೊಫಿ ಪದವಿಯಲ್ಲಿ ಒಟ್ಟು ೨೯ ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ ೧೪ ವಿದ್ಯಾರ್ಥಿನಿಯರು ಹಾಗೂ ೦೨ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯದ ೧೫ ಚಿನ್ನದ ಪದಕಗಳನ್ನು, ೧೦ ದಾನಿಗಳ ಚಿನ್ನದ ಪದಕಗಳು ಹಾಗೂ ೦೪ ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮಾಸ್ಟರ್ ಪದವಿಯಲ್ಲಿ ಒಟ್ಟು ೭೪ ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ ೨೧ ವಿದ್ಯಾರ್ಥಿನಿಯರುಹಾಗೂ ೧೦ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ ೨೩ ಚಿನ್ನದ ಪz ಕU ಳು ಹಾಗೂ ೦೫ ಆವರಣದ ಚಿನ್ನದಪದಕಗಳನ್ನು, ೩೮ ದಾನಿಗಳ ಚಿನ್ನದ ಪದಕಗಳು ಹಾಗೂ ೦೮ ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ.
ಇದಲ್ಲದೆ, ಸ್ನಾತಕ ಪz ವಿಯಲ್ಲಿ ಒಟ್ಟು ೫೭ ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲಿ ೧೪ ವಿದ್ಯಾರ್ಥಿನಿಯರು ಹಾಗೂ ೦೫ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ ೦೬ ಚಿನ್ನದ ಪದಕಗಳು, ೦೪ ಆವರಣದ ಚಿನ್ನದ ದಕಗಳು, ೦೧ ಕೃವಿವಿಯ ಕ್ರೀಡಾ ಚಿನ್ನದ ಪದಕ, ೩೮ ದಾನಿಗಳ ಚಿನ್ನದ ಪದಕಗಳು ಹಾಗೂ ೦೮ ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ ಎಂದರು.
೫೭ನೇ ಘಟಿಕೋತ್ಸವ ಸಮಾರಂಭದಲ್ಲಿ ಒಟ್ಟಾರೆ ೧೬೦ ಚಿನ್ನದ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರಗಳನ್ನುವಿದ್ಯಾರ್ಥಿಗಳು ಪಡೆಯಲಿದ್ದು ಅದರಲ್ಲಿ ೪೯ ವಿಧ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯದ ೪೨ ಚಿನ್ನದ ಪದಕ, ೫೬ ದಾನಿಗಳಚಿನ್ನದ ಪದಕ ಹಾಗೂ ೧೧ ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಅದರಂತೆ ೧೭ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ೧೨ ಚಿನ್ನದ ಪದಕ, ೩೦ ದಾನಿಗಳ ಚಿನ್ನದ ಪದಕ ಹಾಗೂ ೦೯ ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು ಒಟ್ಟು ೬೬ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ೫೪ ಚಿನ್ನದ ಪದಕಗಳನ್ನು, ೮೬ ದಾನಿಗಳ ಚಿನ್ನದ ಪದಕಗಳನ್ನು ಹಾಗೂ ೨೦ ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.