ಆ. 7, ಗಜಪಡೆ ಪಯಣ

ಮೈಸೂರು, ಜು.೩೦- ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ದಿನಗಣನೆ ಶುರುವಾಗಿದ್ದು, ಆಗಸ್ಟ್ ೭ರಂದು ಗಜಪಡೆ ಮೈಸೂರಿಗೆ ಆಗಮಿಸಲಿದೆ.
ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದಲ್ಲಿ ೯ ಆನೆಗಳು ಆಗಮಿಸುತ್ತವೆ. ಬಳಿಕ ಎರಡನೇ ಹಂತದಲ್ಲಿ ೫ ಅಥವಾ ೬ ಆನೆಗಳು ಆಗಮಿಸುತ್ತವೆ. ಇದಕ್ಕಾಗಿ ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಈ ಬಾರಿ ಹೊಸ ಆನೆಗಳಾದ ಗಣೇಶ, ಭೀಮ, ಸುಗ್ರೀವಾ, ಅಜಯ, ಮಹೇಂದ್ರ ಬರುವ ಸಾಧ್ಯತೆಯಿದೆ.
ಸೆಪ್ಟೆಂಬರ್ ೨೬ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ ೫ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.