ಆ. 8: ಕಾಂಗ್ರೆಸ್‌ನಿಂದ ಸ್ವಾತಂತ್ರ್ಯೋತ್ಸವ ನಡಿಗೆ

????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ತುರುವೇಕೆರೆ, ಆ. ೫- ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ವಾತಂತ್ರ್ಯೋತ್ಸವ ನಡಿಗೆ ಕಾರ್ಯಕ್ರಮವನ್ನು ಆ. ೮ ರಂದು ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಬೆಮೆಲ್ ಕಾಂತರಾಜ್ ತಿಳಿಸಿದರು.
ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ನಡಿಗೆ ಕಾರ್ಯಕ್ರಮದ ಅಂಗವಾಗಿ ಬ್ಲಾಕ್ ಅಧ್ಯಕ್ಷರುಗಳಾದ ಪ್ರಸನ್ನಕುಮಾರ್ ಹಾಗೂ ನಾಗೇಶ್ ಅವರ ನೇತೃತ್ವದಲ್ಲಿ ಮುಖಂಡರುಗಳ ಸಭೆ ನಡೆಸಲಾಗಿದೆ. ಸಭೆಯ ವೇಳೆ ಮುಖಂಡರುಗಳಿಂದ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಅರಂಭಗೊಳ್ಳಲಿರುವ ಸ್ವಾತಂತ್ರ್ಯೋತ್ಸವ ನಡಿಗೆಯು ಅಧಿದೇವತೆ ಉಡುಸಲಮ್ಮ ದೇಗುಲದವರೆಗೂ ಸಾಗಲಿದೆ ಎಂದರು.
ಸ್ವಾತಂತ್ರ್ಯೋತ್ಸವ ನಡಿಗೆಯಲ್ಲಿ ತಾಲ್ಲೂಕಿನ ೫ ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರುಗಳು ಹಾಗೂ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಸರ್ಕಾರವು ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಕ್ಕಿ, ಅಡುಗೆ ಎಣ್ಣೆ, ಗ್ಯಾಸ್, ಹಾಲು ಸೇರಿದಂತೆ ಎಲ್ಲ ವಸ್ತುಗಳಿಗೂ ಜಿ.ಎಸ್.ಟಿ ವಿಧಿಸಿದೆ. ಈಗಾಗಲೇ ಕೊರೊನಾದಿಂದ ತತ್ತರಿಸಿದ್ದ ಜನತೆ ಬಿ.ಜೆ.ಪಿ. ಸರ್ಕಾರದ ಬೆಲೆ ಏರಿಕೆಯಿಂದ ನಲುಗುವಂತಾಗಿದೆ. ಸ್ವಾತಂತ್ರ್ಯೋತ್ಸವ ನಡಿಗೆ ಕಾರ್ಯಕ್ರಮದ ವೇಳೆ ಬಿ.ಜೆ.ಪಿ. ಅನುಸರಿಸುತ್ತಿರುವ ಜನವಿರೋಧಿ ನೀತಿಯನ್ನು ಜನಸಾಮಾನ್ಯರಿಗೆ ತಿಳಿಸಲಾಗುವುದು ಎಂದ ಅವರು ಪಂಚಾಯಿತಿ ವ್ಯಾಪ್ತಿಗಳಿಗೂ ಸ್ವಾತಂತ್ರ್ಯೋತ್ಸವ ನಡಿಗೆ ಕಾರ್ಯಕ್ರಮವನ್ನು ಕೊಂಡೊಯ್ಯಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ನಾಗೇಶ್, ಪ್ರಸನ್ನಕುಮಾರ್, ತಾ.ಪಂ. ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಮತ್ತಿತರರು ಉಪಸ್ಥಿತರಿದ್ದರು.