ಇಂಗ್ಲೆಂಡ್ ನಿಂದ ಬಂದವರಿಗೆ 14 ದಿನ ಕ್ವಾರಂಟೈನ್: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಡಾ.ಸುಧಾಕರ್

ಬೆಂಗಳೂರು, ಡಿ 21- ಬ್ರಿಟನ್ ನಿಂದ ಆಗಮಿಸುವವರ ಪ್ರಯಾಣಿಕರ ಬಗ್ಗೆ ತೀವ್ರ ನಿಗಾವಹಿಸಲು ಮುಂದಾಗಿರುವ ರಾಜ್ಯ ಸರ್ಕಾರ ಅವರನ್ನು 14 ದಿನಗಳ ಕಾಲ ಸಾಂಸ್ಥಿಕ ಕ್ಚಾರಂಟೈನ್ ಗೆ ಒಳಪಡಿಸಲು ತೀರ್ಮಾನಿಸಿದೆ.
ನಿನ್ನೆಯಷ್ಟೆ 537 ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದಾರೆ.ಅವರೆಲ್ಲರ ಪರೀಕ್ಷೆ ನಡೆಸಲಾಗುತ್ತದೆ. ಆರ್ ಟಿಪಿಸಿ ಅರ್ ಪರೀಕ್ಷೆ ಕಡ್ಡಾಯಗೊಳಿಸ ಲಾಗಿದೆ. ಒಂದು ವೇಳೆ ವರದಿ ನೆಗೆಟಿವ್ ಬಂದರೂ ಕ್ವಾರಂಟೈನ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಸುದ್ದಿಗಾರರಿಗೆ ಇಂದು
ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ ಮಾಡಲಾಗಿದೆ. ಹೊಸ ರೂಪದಲ್ಲಿ ಕೊರೊನಾ ರೂಪಾಂತರಗೊಳ್ಳು
ತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇಂಗ್ಲೆಂಡ್, ಡೆನ್ಮಾರ್ಕ್ ಹಾಗೂ ನೆದರ್ ಲ್ಯಾಂಡ್ ನಿಂದ ಬಂದವರಿಗೆ ಮಾತ್ರ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಮತ್ತೆ ಲಾಕ್ ಡೌನ್ ಜಾರಿಗೊಳಿಸಿದರೆ ಅದು ಆತುರದ ನಿರ್ಧಾರವಾಗಲಿದೆ ಎಂದು ಸುಧಾಕರ್ ತಿಳಿಸಿದರು.