ಇಂಜನಿಯರಿಂಗ್ ಶುಲ್ಕ ಹೆಚ್ಚಳಕ್ಕೆ ವಿರೋಧ

ಕಲಬುರಗಿ ಡಿ 4:ಇಂಜನಿಯರಿಂಗ್ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸರಕಾರಿ ಸೀಟುಗಳ ಮೇಲೆ 10 ಸಾವಿರ ರೂಗಳವರೆಗೆ ಶುಲ್ಕ ಏರಿಕೆಯನ್ನು ಎಐಡಿಎಸ್‍ಒ ಜಿಲ್ಲಾ ಸಮಿತಿ ವಿರೋಧಿಸಿದೆ.
ಕೂಡಲೇ ಶುಲ್ಕ ಏರಿಕೆಯನ್ನು ವಾಪಸ್ಸು ಪಡೆಯಬೇಕು. ಪ್ರಥಮ ವರ್ಷದ ಇಂಜನಿಯರಿಂಗ್ ವಿದ್ಯಾರ್ಥಿಗಳಿಗೆ 10 ಗಂಟೆ ಕಾಲ ಪಾಠ ಮಾಡುವದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ
ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ತುಳಜಾರಾಮ್ ಎನ್ ಕೆ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು.