ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನಿಂದ ’ಬಿಸು ಪರ್ಬೊ’ ಆಚರಣೆ

ಮಂಗಳೂರು, ಎ.೨೦- ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ’ಬಿಸು ಪರ್ಬೊ’ ಆಚರಣೆ ನಗರದ ಬಲ್ಮಠ ಕುಡ್ಲ ಪೆವಿಲಿನ್ ಸಭಾಂಗಣದಲ್ಲಿ ಜರಗಿತು. ಟ್ರಸ್ಟ್ ಸ್ಥಾಪಕಾಧ್ಯಕ್ಷ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು.
ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯ್ತು . ಲೇಖಕಿ ರೂಪಕಲಾ ಆಳ್ವ ಬಿಸು ಸಂದೇಶ ನೀಡಿದರು. ಕಾರ್ಮಿಕ ನಾಯಕ ಎಂ.ಸುರೇಶ್ಚಂದ್ರ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ ಉಪಸ್ಥಿತರಿದ್ದರು.
’ಸದಾಶಯ’ ತ್ರೈಮಾಸಿಕದ ಪ್ರಧಾನ ಸಂಪಾದಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ರಾಜಗೋಪಾಲ್ ರೈ ಅಭಿನಂದನಾ ಭಾಷಣ ಮಾಡಿದರು. ಪ್ರಧಾನ ಕಾರ್ಯದರ್ಶಿ ಡಾ.ವಸಂತಕುಮಾರ್ ಶೆಟ್ಟಿ ನಿರೂಪಿಸಿ, ಮಹಿಳಾ ವಿಭಾಗದ ವಿಜಯಲಕ್ಷ್ಮಿ ಬಿ.ಶೆಟ್ಟಿ ವಂದಿಸಿದರು.