ನವದೆಹಲಿ, ಜೂ.೨೩- ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತ್ತಿ ರಾಯ್ ೨೯ ವರ್ಷಗಳ ನಂತರ ಕಂಪನಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಫೆಬ್ರವರಿ ೧೯೯೪ ರಲ್ಲಿ ವಿನ್ಯಾಸ ಎಂಜಿನಿಯರ್ ಆಗಿ ಇಂಟೆಲ್ ನಲ್ಲಿ ಕೆಲಸ ಪ್ರಾರಂಭಿಸಿದ್ದರು. ಆ ಬಳಿಕ ಇಂಟೆಲ್ ಫೌಂಡ್ರಿ ಸೇವೆಗಳ ಭಾರತದ ಮುಖ್ಯಸ್ಥ ಮತ್ತು ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಸತತ ೨೯ ವರ್ಷ ಇಂಟೆಲ್ ಇಂಡಿಯಾದಲ್ಲಿ ಕರ್ತವ್ಯ ನಿರ್ವಹಿಸಿ, ಅಂತಿಮವಾಗಿ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಿಳಾ ಸಬಲೀಕರಣಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ೨೦೨೨ ರಲ್ಲಿ ರೈ ಅವರಿಗೆ ನಾರಿ ಶಕ್ತಿ ಪುರಸ್ಕಾರವನ್ನು ನೀಡಲಾಯಿತು.
ಈ ಕುರಿತು ಪ್ರತಿಕ್ರಿಯಿಸಿದ ಇಂಟೆಲ್ ಇಂಡಿಯಾ, ನಿವೃತಿ ರಾಯ್ ಅವರ ನಾಯಕತ್ವದಲ್ಲಿ ಇಂಟೆಲ್ ಇಂಡಿಯಾ ಸಾಧಿಸಿದ ಅದ್ಭುತ ಪ್ರಗತಿ ಸಾಧಿಸಿದೆ. ನಾವು ನಿವೃತ್ತಿ ಅವರಿಗೆ ಕೃತಜ್ಞರಾಗಿರುತ್ತೇವೆ ಎಂದು ಹೇಳಿದೆ.