ಇಂಡಿಗೋ ವಿಮಾನದಲ್ಲಿ ಪ್ರಯಾಣಿಕ ಸಾವು

ನಾಗ್ಪುರ, ಅ. ೨೨-ಮುಂಬೈನಿಂದ ರಾಂಚಿಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುವಾಗ ೬೨ ವರ್ಷದ ಪ್ರಯಾಣಿಕರೊಬ್ಬರು ವಿಮಾನದ ಮಧ್ಯೆ ರಕ್ತ ವಾಂತಿ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಪ್ರಯಾಣಿಕರ ಆರೋಗ್ಯ ಸ್ಥಿತಿಯ ಹಿನ್ನೆಲೆಯಲ್ಲಿ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.
ತುರ್ತು ಪರಿಸ್ಥಿತಿಗಳಿಗಾಗಿ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದ ಕಿಮ್ಸ್-ಕಿಂಗ್ಸ್ ನ್ಯೂ ಆಸ್ಪತ್ರೆಯ ವೈದ್ಯಕೀಯ ತಂಡದಿಂದ ಅವರಿಗೆ ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಯ ವರದಿ ಪ್ರಕಾರ ಪ್ರಯಾಣಿಕರು ಕ್ಷಯ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ) ಯಿಂದ ಬಳಲುತ್ತಿದ್ದರು.
ಅವರು ವಿಮಾನದಲ್ಲಿ ರಕ್ತ ವಾಂತಿ ಮಾಡಿದ ನಂತರ ತುರ್ತಾಗಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೃತದೇಹವನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.
ವಿಮಾನ ನಿಲ್ದಾಣದಿಂದ ರೋಗಿಯನ್ನು ಆಸ್ಪತ್ರೆಗೆ ಕರೆತರುವ ಎರಡನೇ ಘಟನೆ ಇದಾಗಿದೆ.
ಕಳೆದ ವಾರ, ನಾಗುರಾ-ಪುಣೆ ವಿಮಾನವನ್ನು ಹತ್ತಲು ಕಾಯುತ್ತಿದ್ದ ೪೦ ವರ್ಷದ ಇಂಡಿಗೋ ಪೈಲಟ್ ವಿಮಾನ ನಿಲ್ದಾಣದ ಭದ್ರತಾ ಹೋಲ್ಡ್ ಪ್ರದೇಶದಲ್ಲಿ ಸಾವನ್ನಪ್ಪಿದ್ದರು.