ಇಂಡಿಯಾ ತೊರೆದ ಆರ್‌ಎಲ್‌ಡಿ:ಎನ್‌ಡಿಎಗೆ ಸೇರ್ಪಡೆ

ನವದೆಹಲಿ,ಮಾ.೩:ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೆ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತವಾಗಿದ್ದು, ರಾಷ್ಟ್ರೀಯ ಜನತಾದಳ ಇಂಡಿಯಾ ಮೈತ್ರಿಕೂಟಕ್ಕೆ ಸೇರಿದೆ.
ದೆಹಲಿಯಲ್ಲಿ ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್‌ಚೌಧರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮೈತ್ರಿಕೂಟಕ್ಕೆ ಸೇರಲು ಒಪ್ಪಿಗೆ ಸೂಚಿಸಿದ್ದಾರೆ.
ಆರ್‌ಎಲ್‌ಡಿ ಇಂಡಿಯಾ ಮೈತ್ರಿಕೂಟಕ್ಕೆ ಸೇರ್ಪಡೆಯಾಗುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಬಹಿರಂಗಪಡಿಸಿದ್ದಾರೆ.
ಚೌಧರಿ ಅವರ ಜತೆ ಮಾತುಕತೆ ನಡೆದಿದ್ದು, ಎನ್‌ಡಿಎಗೆ ಸೇರುವ ಜಯಂತ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ನರೇಂದ್ರಮೋದಿ ಅವರು ಮತ್ತೆ ಪ್ರಧಾನಿಯಾಗಲು ಮತ್ತು ಭಾರತದ ಪ್ರಯಾಣ, ಉತ್ತರ ಪ್ರದೇಶದ ಅಭಿವೃದ್ಧಿಯಲ್ಲಿ ಚೌಧರಿ ಅವರು ಪ್ರಮುಖ ಕೊಡುಗೆ ನೀಡುತ್ತಾರೆ ಎಂದು ಹೇಳಿದರು.
ಇದೇ ವೇಳೆ ಅಮಿತ್ ಶಾ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆರ್‌ಎಲ್‌ಡಿ ಸೇರ್ಪಡೆಯಿಂದ ಎನ್‌ಡಿಎಗೆ ಮತ್ತಷ್ಟು ಬಲ ಬಂದಂತಾಗಿದೆ. ಬಡವರು ಮತ್ತು ವಂಚಿತ ವರ್ಗಗಳ ಅಭಿವೃದ್ಧಿಗೆ ಪೂರಕವಾಗಲಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ೪೦೦ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎನ್‌ಡಿಎ ಮೈತ್ರಿಕೂಟ ಸೇರ್ಪಡೆಯಾಗುವುದಾಗಿ ಆರ್‌ಎಲ್‌ಡಿ ಫೆ. ೧೩ ರಂದು ಘೋಷಣೆ ಮಾಡಿತ್ತು. ಈಗ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟ ತೊರೆದು ಎನ್‌ಡಿಎ ತೆಕ್ಕೆಗೆ ಮರಳಿದೆ.