ಇಂಡಿಯಾ ಮೈತ್ರಿಕೂಟದಲ್ಲಿ ಅಪಸ್ವರ

ನವದೆಹಲಿ,,ಜು.೨೯:ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಸ್ಥಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಮೈತ್ರಿಕೂಟದಲ್ಲಿ ಅಪಸ್ವರಗಳು ಕಾಣಿಸಿಕೊಂಡಿದ್ದು, ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿಯ ಮುಖ್ಯಸ್ಥ ಶರದ್‌ಪವಾರ್ ಪ್ರಧಾನಿ ನರೇಂದ್ರಮೋದಿ ಅವರ ಜತೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಳ್ಳುತ್ತಿರುವುದು ಮೈತ್ರಿಕೂಟದಲ್ಲಿ ಅಸಮಾಧಾನ ಮೂಡಲು ಕಾರಣವಾಗಿದೆ.ಆಗಸ್ಟ್ ೧ ರಂದು ಮಹಾರಾಷ್ಟ್ರದ ಪುಣೆಯಲ್ಲಿ ತಿಲಕ್ ಸ್ಮಾರಕ ಮಂದಿರ್ ಟ್ರಸ್ಟ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್‌ಪವಾರ್ ಪಾಲ್ಗೊಳ್ಳಲಿದ್ದು, ಶರದ್‌ಪವಾರ್ ಅವರು ಪ್ರಧಾನಿ ಮೋದಿ ಅವರಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಶರದ್‌ಪವಾರ್ ಅವರ ಬಗ್ಗೆ ಇಂಡಿಯಾ ಮೈತ್ರಿಕೂಟದಲ್ಲಿರುವ ಕೆಲ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ.
ಇಂಡಿಯಾ ಮೈತ್ರಿಕೂಟದ ಪ್ರಮುಖ ವಿರೋಧಿಯಾಗಿರುವ ಪ್ರಧಾನಿ ನರೇಂದ್ರಮೋದಿ ಅವರ ಜತೆ ಪವಾರ್ ವೇದಿಕೆ ಹಂಚಿಕೊಳ್ಳುತ್ತಿರುವುದು ಸರಿಯಲ್ಲ ಎಂಬ ಕಳವಳವನ್ನು ಮೈತ್ರಿಕೂಟದ ಹಲವು ಪಕ್ಷಗಳು ವ್ಯಕ್ತಪಡಿಸಿದ್ದು. ಈ ಕಾರ್ಯಕ್ರಮದಲ್ಲಿ ಪವಾರ್ ಪಾಲ್ಗೊಳ್ಳದಂತೆ ಅವರಗೆ ತಿಳಿ ಹೇಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಮೈತ್ರಿಕೂಟದ ಪಕ್ಷಗಳು ಒತ್ತಡ ಹೇರಿವೆ.
ಇತ್ತೀಚೆಗಷ್ಟೆ ಸ್ಥಾಪನೆಯಾಗಿರುವ ಮೈತ್ರಿಕೂಟ ಎನ್‌ಡಿಎಗೆ ಸಡ್ಡು ಹೊಡೆದಿದ್ದು, ಮೈತ್ರಿಕೂಟದ ಎಲ್ಲ ಪಕ್ಷಗಳು ಒಗ್ಗಟ್ಟಿನ ಜಪ ಮಾಡುತ್ತಿರುವಾಗಲೇ ಶರದ್‌ಪವಾರ್ ಅವರು ಮೋದಿ ಜತೆ ವೇದಿಕೆಯಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿರುವುದು ಅಸಮಾಧಾನ ಹೊಗೆಯಾಡಲು ಕಾರಣವಾಗಿದೆ.
ಪವಾರ್ ಅವರ ನಡೆಯ ಬಗ್ಗೆ ಮೈತ್ರಿಕೂಟದಲ್ಲಿ ತೀವ್ರ ಅಪಸ್ವರ ಕೇಳಿ ಬಂದಿದೆ.
ಪ್ರಧಾನಿ ಮೋದಿ ಅವರು ಇಂಡಿಯಾ ಮೈತ್ರಿಕೂಟವನ್ನು ಈಸ್ಟ್ ಇಂಡಿಯಾ ಕಂಪನಿ ಇಂಡಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಹೋಲಿಕೆ ಮಾಡಿದ್ದಾರೆ. ಹೀಗಾಗಿ ಪವಾರ್ ಪ್ರಧಾನಿ ಜತೆ ವೇದಿಕೆ ಹಂಚಿಕೊಳ್ಳುವುದು ಸೂಕ್ತವಲ್ಲ ಎಂದು ಮೈತ್ರಿಕೂಟದ ಕೆಲ ಪಕ್ಷಗಳು ಹೇಳಿವೆ.
ಇಂಡಿಯಾ ಮೈತ್ರಿಕೂಟದಲ್ಲಿ ಮೋದಿ ಜತೆಗೆ ವೇದಿಕೆ ಹಂಚಿಕೊಳ್ಳುವುದಕ್ಕೆ ಅಪಸ್ವರ ತೆಗೆದಿರುವುದರಿಂದ ಸೋಮವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪವಾರ್ ಭಾಗಿಯಾಗುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ. ಇದುವರೆಗೂ ಪವಾರ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.
ಮುಂಬೈನಲ್ಲಿ ೩ನೇ ಸಭೆ
ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಹಿಮ್ಮೆಟ್ಟಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ೩ನೇ ಸಭೆ ಮುಂಬೈನಲ್ಲಿ ಆ. ೨೫ ಮತ್ತು ೨೬ ರಂದು ನಡೆಯಲಿದೆ.
ಶಿವಸೇನೆ (ಯುಬಿಟಿ) ಮತ್ತು ಪವಾರ್ ನೇತೃತ್ವದ ಎನ್‌ಸಿಪಿ ಈ ಸಭೆಯನ್ನು ಆಯೋಜಿಸಿದೆ. ಈ ಮೊದಲು ಬಿಹಾರ