ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲಸಚಿವ ಸಂಪುಟಕ್ಕೆ ಸೇರ್ಪಡೆಗೆ ಒತ್ತಾಯ

ವಿಜಯಪುರ :ಮೇ.19: ಸರಳ ಸಜ್ಜನಿಕೆ ವ್ಯಕ್ತಿ, ಅಭಿವೃದ್ದಿಯ ಹರಿಕಾರ, ಜಾತಿ,ಮತ,ಪಂಥ ಎನ್ನುವ ಗೋಜಿಗೆ ಹೋಗದೇ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತಿರುವ ಯಶವಂತರಾಯಗೌಡ ಪಾಟೀಲ ಅವರು ಈ ಬಾರಿ ಪ್ರಚಂಡ ಬಹುಮತದಿಂದ ಕಾಂಗ್ರೆಸ್ ಪಕ್ಷದಿಂದ ಆರಿಸಿ ಬಂದಿದ್ದು, 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ 135 ಶಾಸಕರನ್ನು ಆಯ್ಕೆಗೊಳಿಸುವ ಮೂಲಕ ಬಹುಮತದ ಸರಕಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಯಶವಂತ್ರಾಯಗೌಡ ಪಾಟೀಲ ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಇದರೊಂದಿಗೆ 2018ರಲ್ಲಿ ಜೆಡಿಎಸ್-ಕಾಂಗ್ರೆಸನ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರಕಾರದ ಸಂಪುಟದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಇವರಿಗೆ ವಹಿಸಿದ ಜವಾಬ್ದಾರಿಯನ್ನು ಇವರು ಬಹಳ ನಿಷ್ಠೆಯಿಂದ ಪ್ರಮಾಣಿಕತೆಯಿಂದ ನಿಭಾಯಿಸಿ ಕ್ಷೇತ್ರದ ಜನತೆಯ ಮನಸ್ಸಿನಲ್ಲಿ ಅಚ್ಚಳೆಯಂತೆ ಮೂಡಿದ್ದಾರೆ. ಇಂತಹ ಮೇರು ವ್ಯಕ್ತಿತ್ವದ ಯಶವಂತ್ರಾಯಗೌಡ ಪಾಟೀಲ ಇವರಿಗೆ ಕಾಂಗ್ರೆಸ್ ಸರಕಾರದಲ್ಲಿ ಉನ್ನತ ಮಟ್ಟದ ಖಾತೆಯನ್ನು ನೀಡುವುದರ ಮೂಲಕ ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸಬೇಕೆಂದು ಬಳ್ಳೊಳ್ಳಿ ಕಾಂಗ್ರೆಸ್ ಮಹಿಳಾ ಮುಖಂಡರಾದ ಭಾರತಿ ಸಿದ್ದಾರಾಮ ಕಟ್ಟಿಮನಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.