ಇಂಡೋನೇಶಿಯಾಕ್ಕೆ ಮೋದಿ

ನವದೆಹಲಿ,ಸೆ.೬-೨೦ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು ೧೮ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಂಜೆ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ
ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೋ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜಕಾರ್ತಾದಲ್ಲಿ ನಾಳೆ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆ ಮತ್ತು ೧೮ ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಸಂಜೆ ದೆಹಲಿಗೆ ವಾಪಾಸ್ಸಾಗಲಿದ್ದಾರೆ
ಸೆ.೯ ಮತ್ತು ೧೦ ರಂದು ಭಾರತದ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಜಿ ೨೦ ಶೃಂಗಸಭೆಗೆ ಮುಂಚಿತವಾಗಿ ಪ್ರಧಾನಿ ಮೋದಿ ಅವರ ಇಂಡೋನೇಷ್ಯಾ ಭೇಟಿ ಇದಾಗಿದೆ. ಇಂಡೋನೇಷ್ಯಾ ಕೂಡ ಜಿ-೨೦ ಗುಂಪಿನ ಭಾಗವಾಗಿದೆ.
ಮುಂಬರುವ ಆಸಿಯಾನ್-ಭಾರತ ಶೃಂಗಸಭೆಯು ಭಾರತ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವುದು, ಉಭಯ ದೇಶಗಳ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಹೆಚ್ಚಿಸುವುದು ಪ್ರಧಾನಿ ಭೇಟಿಯ ಪ್ರಮುಖ ಉದ್ದೇಶವಾಗಿದೆ.
ಭಾರತ-ಆಸಿಯಾನ್ ಸಂಬಂಧಗಳ ಪ್ರಗತಿ ಪರಿಶೀಲನೆ ಮತ್ತು ಸಹಕಾರದ ಭವಿಷ್ಯದ ದಿಕ್ಕನ್ನು ಪಟ್ಟಿ ಮಾಡುವುದು ಶೃಂಗಸಭೆಯ ಉದ್ದೇಶವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಇಂಡೋನೇಷಿಯಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇದುವರೆಗೂ ಬಳಸುತ್ತಿದ್ದ ಇಂಡಿಯಾ ಪ್ರಧಾನಿ ಎನ್ನುವುದನ್ನು ಪಕ್ಕಕ್ಕೆ ಇಟ್ಟು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಪ್ರವಾಸ ಎಂದು ಆಹ್ವಾನ ಪತ್ರಿಕೆಯಲ್ಲಿ ಹಾಕಲಾಗಿದೆ.