ಇಂದಿನಿಂದ ಶಾಲಾಕಾಲೇಜು ಆರಂಭ

ರಾಯಚೂರು.ಜ.೧.ಸುಮಾರು ತಿಂಗಳುಗಳ ನಂತರ ಹೊಸ ವರ್ಷದ ಮೊದಲ ದಿನಕ್ಕೆ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಆರಂಭವಾದವು.
ನಗರದ ಶಾಲಾ ಕಾಲೇಜುಗಳಲ್ಲಿ ಇಂದು ಹಬ್ಬದ ವಾತಾವರಣ ವಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದರು.ಕೊರೊನಾ ಮುಂಜಾಗ್ರತಾ ಕ್ರಮವಾಗಿ ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿ ಮತ್ತು ಶಿಕ್ಷಕರು ಕೋವಿಡ್ ಪರೀಕ್ಷೆ ಯನ್ನು ಮಾಡಿಕೊಂಡು ಬಂದಿದ್ದಾರೆ.ತಾಲೂಕಿನ ಉಡಾಮಗಲ್ ಖಾನಪುರ,ಶಕ್ತಿ ನಗರ ಸೇರಿದಂತೆ ಶಾಲೆ, ಕಾಲೇಜುಗಳ ಕೋಣೆ, ಶೌಚಾಲಯಗಳು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಿಸಿದ್ದು ವಿದ್ಯಾರ್ಥಿಗಳನ್ನು ಶಿಕ್ಷಕರು ಸಿಹಿ ಹಂಚುವ ಮೂಲಕ ಬರಮಾಡಿಕೊಂಡರು.