
ಧಾರವಾಡ,ಸೆ.1: ನಾರಾಯಣ ಗುರುಗಳು ಜಾತಿ ಮತ್ತು ಧರ್ಮದ ಗುರುವಲ್ಲ. ಅವರು ಲೋಕದ ಗುರು. ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ನಾಯಕರು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಅವರು ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾರಾಯಣ ಗುರುಗಳು ಸಮಾಜದಲ್ಲಿನ ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಹಾನ್ ದಾರ್ಶನಿಕ. ಮೇಲು, ಕೀಳು ತೊಡೆದುಹಾಕಿ ಸಮಾನತೆಯ ಸಮಾಜಕ್ಕೆ ಪ್ರಯತ್ನಿಸಿದ ಗುರುಗಳು. ಸಮಾಜಕ್ಕೆ ದಾರಿ ತೋರುವ ಪ್ರಯತ್ನವನ್ನು ನಾರಾಯಣ ಗುರುಗಳು ಮಾಡಿದರು ಎಂದರು.
ಬೆಂಗಳೂರಿನ ಪ್ರಗತಿ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ನಾಗಕಲಾಲ ಈಳಿಗೇರ ಅವರು ವಿಶೇ?À ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಚಂದ್ರಶೇಖರ ಡವಳಗಿ, ಹುಬ್ಬಳ್ಳಿ ಧಾರವಾಡ ನಾಮಧಾರಿ ಸಂಘದ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಹುಬ್ಬಳ್ಳಿ ಧಾರವಾಡ ಬಿಲ್ಲವ ಸಂಘದ ಅಧ್ಯಕ್ಷ ಆನಂದ ಪೂಜಾರಿ ಮತ್ತು ಸಮುದಾಯದ ಶಂಕರ್ ಕೊಟ್ಟಿನ, ಶ್ರೀನಾಥ ಬಿ.ಐ. ಈಳಿಗೆರ ಅವರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ಅವರು ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಮುಖಂಡರು, ವಿವಿಧ ಸಮುದಾಯಗಳ ಸದಸ್ಯರು ಉಪಸ್ಥಿತರಿದ್ದರು.