ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಮನವಿ


ಲಕ್ಷ್ಮೇಶ್ವರ,ಜೂ.16: ಗದಗ ಜಿಲ್ಲೆಯಲ್ಲಿ ಗದಗ ನಂತರ ಭರದಿಂದ ಬೆಳೆಯುತ್ತಿರುವ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ, ಸುಜಾತ ದೊಡ್ಡಮನಿ ಹೇಳಿದ್ದಾರೆ.
ಅವರು ಲಕ್ಷ್ಮೇಶ್ವರ ಪಟ್ಟಣ ಶೈಕ್ಷಣಿಕವಾಗಿ ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿದ್ದು ವ್ಯಾಪಾರ ವಹಿವಾಟಿಗಾಗಿ ಮತ್ತು ಶಿಕ್ಷಣಕ್ಕಾಗಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಆಸ್ಪತ್ರೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಡ ರೋಗಿಗಳು ಬರುತ್ತಿದ್ದಾರೆ.
ಲಕ್ಷ್ಮೇಶ್ವರ ಪಟ್ಟಣ ಐವತ್ತು ಸಾವಿರ ಜನಸಂಖ್ಯೆ ಹೊಂದಿದ್ದು ಜೊತೆಗೆ ಪ್ರತಿನಿತ್ಯ 25 ರಿಂದ 30 ಸಾವಿರ ಜನ ಬಂದು ಹೋಗುತ್ತಿದ್ದಾರೆ ಜೊತೆಗೆ ನೆರೆಯ ತಾಲೂಕುಗಳಿಂದಲೂ ಜನತೆ ಬರುತ್ತಿದ್ದಾರೆ.
ಲಕ್ಷ್ಮೇಶ್ವರದ ಸಮುದಾಯ ಆರೋಗ್ಯ ಕೇಂದ್ರ ಕ್ಕೆ ಪ್ರತಿನಿತ್ಯ ಮುನ್ನೂರಕ್ಕೂ ಹೆಚ್ಚು ಹೊರರೋಗಿಗಳು ಬಂದು ಹೋಗುತ್ತಿದ್ದು ಇವರೆಲ್ಲರ ಅನುಕೂಲಕ್ಕಾಗಿ ಬಡವರ ಅನುಕೂಲಕ್ಕಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲಕ್ಷ್ಮೇಶ್ವರದಲ್ಲಿ ಇಂದಿರಾ ಕ್ಯಾಂಟೀನ್ ಅವಶ್ಯಕತೆ ಇದೆ ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ್ ಅವರಿಗೆ ಮನವಿ ಸಲ್ಲಿಸಿ ಈಗಾಗಲೇ ತಾಲೂಕು ರಚನೆಯಾಗಿದ್ದು ಆದ್ದರಿಂದ ಇಂದಿರಾ ಕ್ಯಾಂಟೀನ್ ಅವಶ್ಯಕತೆ ಇದೆ ಎಂಬ ಅಂಶವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ.