ಇಂದಿರಾ 36ನೇ ಪುಣ್ಯತಿಥಿ: ಮೋದಿ, ಪ್ರಿಯಾಂಕಾ ಗೌರವ ನಮನ

ನವದೆಹಲಿ,ಅ.೩೧-ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ೩೬ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಗೌರವ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜಿ ಅವರ ಪುಣ್ಯ ತಿಥಿಯಂದು ನಮನಗಳು ಎಂದಿದ್ದಾರೆ.
ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದ್ದಾರೆ.
ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದ್ದಾರೆ.

ಸುಳ್ಳಿನಿಂದ ಸತ್ಯದೆಡೆಗೆ. ಕತ್ತಲೆಯಿಂದ ಬೆಳಕಿನೆಡೆಗೆ. ಸಾವಿನಿಂದ ಜೀವನದೆಡೆಗೆ. ಈ ಮಾತುಗಳ ಪ್ರಕಾರ ಬದುಕುವುದರ ಅರ್ಥವೇನೆಂದು ನನಗೆ ತೋರಿಸಿದ್ದಕ್ಕಾಗಿ ಧನ್ಯವಾದಗಳು ದಾದಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಮತ್ತು ಮಾಜಿ ಪ್ರಧಾನ ಮಂತ್ರಿಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.
ಕಳೆದ ಭಾನುವಾರವೂ ಮಾಸಿಕ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇಂಧಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದರು. ’ಅಕ್ಟೋಬರ್ ೩೧ ರಂದು ನಾವು ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯನ್ನು ಕಳೆದುಕೊಂಡೆವು. ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ’ ಎಂದು ಹೇಳಿದ್ದರು.