ಇಂದು ಐ ಎಂ ಎ ಹಾಲ್ ನಲ್ಲಿ ಏಮ್ಸ್ ಸಭೆ

ರಾಯಚೂರು,ಮಾ.೧೭-
ಜಿಲ್ಲೆಗೆ ಏಮ್ಸ್ ಮಂಜೂರಾಗಬೇಕು ಈ ನಿಟ್ಟಿನಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಇಂದು ಸಂಜೆ ೦೫ಗಂಟೆಗೆ ನಗರದಲ್ಲಿರುವ ಐ ಎಂ ಎ ಸಭಾಂಗಣದಲ್ಲಿ ಸಭೆ ಸೇರಲು ತೀರ್ಮಾನಿಸಲಾಗಿದೆ ಎಂದು ಹೋರಾಟ ಸಮಿತಿಯ ಪ್ರದಾನ ಸಂಚಾಲಕರಾದ ಬಸವರಾಜ್ ಕಳಸ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಲಾಗುವುದು ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡಬೇಕೆಂದು ಮನವಿ ಮಾಡಿಕೊಂಡರು.