ಇಂದು ಸಹ 5ನೇ ತರಗತಿ ವರೆಗೆ ರಜೆ ಘೋಷಣೆ

ಬೀದರ್: ಜು.14:ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಸೀತ ಗಾಳಿಯಿಂದ ಸಣ್ಣ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಹಿನ್ನೆಲೆಯಲ್ಲಿ ಅಂಗನವಾಡಿ ಹಾಗೂ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿ.ಸಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.