ಇಂದು ಹುಣಸಗಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ಬ್ರಹತ್ ರೋಡ ಶೋ

ಹುಣಸಗಿ : ಮಾ.9:ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋ ಹಮ್ಮಿಕೊಳ್ಳಲಾಗಿದ್ದು ಕ್ಷೇತ್ರದ ಜನರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸುರಪುರ ಶಾಸಕ ನರಸಿಂಹ ನಾಯಕ ರಾಜುಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
20 ಸಾವಿರದಿಂದ 25 ಸಾವಿರಾ ಜನಸಂಖ್ಯೆ ಸೇರುವ ನಿರೀಕ್ಷೆಯಿದೆ ಎಂದರು, ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಭಗವಂತ ಖುಬಾ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ , ಸಚಿವರಾದ ಶ್ರೀರಾಮುಲು, ಆನಂದ ಸಿಂಗ್, ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ, ಸಂಸದ ಅಮರೇಶ ನಾಯಕ, ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿಯ ಕಾರ್ಯಗಳ ಬಗ್ಗೆ ಜನತೆಗೆ ತಿಳಿಸಿಲಾಗುವುದು ಎಂದರು. ಈ ಸಂದರ್ಭದಲ್ಲಿ ವೀರೆಶ ಸಾಹುಕಾರ ಚಿಂಚೋಳಿ, ಬಿ.ಎಮ್ ಅಳ್ಳಿಕೊಟಿ, ಮೇಲಪ್ಪ ಗುಳಗಿ, ಬಿಜೆಪಿ ಪ್ರಮುಖ ಮುಖಂಡರು ಇತರರು ಇದ್ದರು.