ಇಂದು 4373 ಜನರಿಗೆ ಸೋಂಕು,19,ಸಾವು

ಬೆಂಗಳೂರು, ಏ.3- ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಮುಂದುವರೆದಿದ್ದು ಸತತ ನಾಲ್ಕನೇ ದಿನವೂ ಹೊಸ ಪ್ರಕರಣಗಳು ನಾಲ್ಕುಸಾವಿರ ಗಡಿದಾಟಿದೆ. ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರ ಗಡಿದಾಟಿದೆ.
ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 19ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಮುತ್ತು ಮೈಸೂರಿನಲ್ಲಿ ತಲಾ ಆರು ಮಂದಿ ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದಾರೆ. ಹಾಗೆಯೇ ಹಾಸನದಲ್ಲಿ ಮೂವರು ಸೋಂಕಿತ ರು,,ಮಂಡ್ಯದಲ್ಲಿ ಇಬ್ಬರು , ಕಲ್ಬುರ್ಗಿಹಾಗೂ ತುಮಕೂರಿನ ಲ್ಲಿ ತಲಾ ಒಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ಗಡಿದಾಟಿದೆ

ಇಂದು ರಾಜ್ಯದಲ್ಲಿ4373 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು1959ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ19 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ1010602ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು961359 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 36614 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12610 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 327 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 3002 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 444244ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 06 ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4641ಕ್ಕೆ ಏರಿಕೆಯಾಗಿದೆ.
ಇಂದು1052 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ413058 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು26544 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 08, ಬಳ್ಳಾರಿ 23, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 54, ಬೀದರ್ 172, ಚಾಮರಾಜನಗರ 18, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 36, ಚಿತ್ರದುರ್ಗ 14, ದಕ್ಷಿಣ ಕನ್ನಡ 83, ದಾವಣಗೆರೆ 29, ಧಾರವಾಡ 39, ಗದಗ 09, ಹಾಸನ 59, ಹಾವೇರಿ 04, ಕಲಬುರಗಿ 151, ಕೊಡಗು 11, ಕೋಲಾರ 13, ಕೊಪ್ಪಳ 32, ಮಂಡ್ಯ 36, ಮೈಸೂರ171, ರಾಯಚೂರು 19, ರಾಮನಗರ 07, ಶಿವಮೊಗ್ಗ 36, ತುಮಕೂರು 167, ಉಡುಪಿ53, ಉತ್ತರ ಕನ್ನಡ 29, ವಿಜಯಪುರ 18, ಯಾದಗಿರಿ 13.