ಇಂದು 6570 ಜನರಿಗೆ ಸೋಂಕು; 36 ಸಾವು

ಬೆಂಗಳೂರು, ಏ.8- ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದ್ದು. ಇಂದೂ ಸಹ ರಾಜ್ಯದಲ್ಲಿ ಹೊಸ ಪ್ರಕರಣಗಳು ಏಳು ಸಾವಿರ ಸನಿಹದಲ್ಲಿದೆ.
ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿದಾಟಿದೆ.
ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 36 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 22, ಸೋಂಕಿತರು, ಕಲ್ಬುರ್ಗಿಯಲ್ಲಿ ಮೂವರು , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ದಲ್ಲಿ ಇಬ್ಬರು ಸೋಂಕಿತರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಹಾಗೆಯೇ ಬೆಳಗಾವಿ ,ಬೀದರ್, ಧಾರವಾಡ, ಕೋಲಾರ, ತುಮಕೂರು, ವಿಜಯಪುರ ಹಾಗೂ, ಮೈಸೂರಿನಲ್ಲಿ ತಲಾ ಒಬ್ಬರು ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐವತ್ತು ಸಾವಿರ ದಾಟಿದೆ.

ಇಂದು ರಾಜ್ಯದಲ್ಲಿ6570 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು2393ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ36ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ1040130ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು973949 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 53395 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12767 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 357 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಹೊಸ ಸೋಂಕು ಪ್ರಕರಣಗಳು ನೆನ್ನೆಗಿಂತ ಕೊಂಚ ಕಡಿಮೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 4422 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 464438ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 22,ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4740ಕ್ಕೆ ಏರಿಕೆಯಾಗಿದೆ.
ಇಂದು1243 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ420751 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು38946 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 21, ಬಳ್ಳಾರಿ 126, ಬೆಳಗಾವಿ 92,ಬೆಂಗಳೂರು ಗ್ರಾಮಾಂತರ 54, ಬೀದರ್ 129 ಚಾಮರಾಜನಗರ 56, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 40, ಚಿತ್ರದುರ್ಗ 24, ದಕ್ಷಿಣ ಕನ್ನಡ 145, ದಾವಣಗೆರೆ 28, ಧಾರವಾಡ 96, ಗದಗ 14, ಹಾಸನ 94, ಹಾವೇರಿ 15, ಕಲಬುರಗಿ 240, ಕೊಡಗು 19, ಕೋಲಾರ 66, ಕೊಪ್ಪಳ 27, ಮಂಡ್ಯ 29, ಮೈಸೂರ 216, ರಾಯಚೂರು 40, ರಾಮನಗರ 10, ಶಿವಮೊಗ್ಗ 70, ತುಮಕೂರು 183, ಉಡುಪಿ 63, ಉತ್ತರ ಕನ್ನಡ 142, ವಿಜಯಪುರ 60, ಯಾದಗಿರಿ 26.