ಇಂದ್ರಧನುಷ್ ಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ

ಇಲಕಲ:ಆ.10:ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ನೂತನವಾಗಿ ಜಾರಿಗೆ ತಂದ ಮಿಷನ್ ಇಂದ್ರ ಧನುಷ್ ಲಸಿಕೆ 5.0 ಯೋಜನೆಯನ್ನು ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರ ಮಕ್ಕಳ ಆರೋಗ್ಯದ ಬಗ್ಗೆ ತೀವ್ರ ಕಾಳಜಿಯನ್ನು ಹೊಂದಿದ್ದು ಅದಕ್ಕಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ವೈದ್ಯರು ತಮ್ಮಲ್ಲಿ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ರೋಗಿಗಳು ಸಹ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು .
ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳು, ನಗರಸಭೆಯ ಸದಸ್ಯರು ಹಾಗೂ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.