ಇಂಧನ ಸಚಿವರಿಂದ ಗೃಹಜ್ಯೋತಿ ಯೋಜನೆ ಚಾಲನೆಯ ಸಿದ್ಧತೆ ಪರಿಶೀಲನೆ

ಕಲಬುರಗಿ,ಆ.4:ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿಗಳು ಆಗಸ್ಟ್ 5 ರಂದು ಚಾಲನೆ ನೀಡಲಿದ್ದು, ಕಾರ್ಯಕ್ರಮ ನಡೆಯುವ ನಗರದ ಎನ್.ವಿ. ಮೈದಾನಕ್ಕೆ ಭೇಟಿ ನೀಡಿದ ರಾಜ್ಯದ ಇಂಧನ ಖಾತೆ ಸಚಿವರಾದ ಕೆ.ಜೆ. ಜಾರ್ಜ್ ಅವರು ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಸ್ಥಳದಲ್ಲಿದ ಅಧಿಕಾರಿಗಳಿಂದ ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ಪಡೆದರು. ಸಾರ್ವಜನಿಕರಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು, ಊಟ ಮುಂತಾದ ಸೌಲಭ್ಯಗಳನ್ನು ಕಲ್ಪಿಸುವಂತೆ ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಭದ್ರತಾ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ ಆರ್., ಜೆಸ್ಕಾಂ ಎಂ.ಡಿ. ರಾಹುಲ ಪಾಂಡ್ವೆ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವಾರ್ ಸಿಂಗ್ ಮೀನಾ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.