ಇಂಧನ ಸಚಿವರ ಪ್ರವಾಸ

ಕಲಬುರಗಿ,ಆ.03:ರಾಜ್ಯದ ಇಂಧನ ಖಾತೆ ಸಚಿವರಾದ ಕೆ.ಜೆ. ಜಾರ್ಜ್ ಅವರು ಹೈದ್ರಾಬಾದ್‍ದಿಂದ ವಿಮಾನದ ಮೂಲಕ ಆಗಸ್ಟ್ 4 ರಂದು ಮಧ್ಯಾಹ್ನ 1.30 ಗಂಟೆಗೆ ಕಲಬುರಗಿಗೆ ಆಗಮಿಸುವರು.

 ನಂತರ ಅಂದು ಮಧ್ಯಾಹ್ನ 3.30 ಗಂಟೆಗೆ ಗೃಹಜ್ಯೋತಿ ಯೋಜನೆ ಉದ್ಘಾಟನೆಗೆ ಸಂಬಂಧಿಸಿದಂತೆ ಮಾಡಲಾದ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.  
   ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಗೃಹಜ್ಯೋತಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.